ಮಂಗಳೂರಿಗೆ ಪ್ರಧಾನಿ ಮೋದಿ ಸಹೋದರ ಸೋಮಬಾಯಿ ಮೋದಿ ಭೇಟಿ
ಮಂಗಳೂರು, ಜುಲೈ 9: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಬಾಯ್ ಮೋದಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಕರಾವಳಿ ಜಿಲ್ಲೆಯ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವ ಉದ್ದೇಶದಿಂದ ಸೋಮಬಾಯಿ ಮೋದಿ ಇಂದು ಮಂಗಳೂರಿಗೆ ಆಗಮಿಸಿದ್ದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ದೇವಸ್ಥಾನ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಬಂದಿದ್ದೇನೆ. ನರೇಂದ್ರ ಮೋದಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅದರಂತೆ ನಾನು ಕೂಡ ಮೋದಿಯನ್ನು ಮೆಚ್ಚಿಕೊಂಡಿದ್ದೇನೆ ಎಂದು ಅವರು ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಜಿಲ್ಲೆಗೆ ಆಗಮಿಸಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಹಿಂದೆ ಕಳೆದ ಫೆಬ್ರುವರಿಯಲ್ಲಿ ನರೇಂದ್ರ ಮೋದಿ ಅವರ ಮತ್ತೊಬ್ಬ ಸಹೋದರ ಪ್ರಹ್ಲಾದ್ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು.












Click it and Unblock the Notifications