ಬಲಿಪ ನಾರಾಯಣ ಭಾಗವತರು ವಿಧಿವಶ: ಕರಾವಳಿ ಕಲಾವಿದನ ಅಗಲಿಕೆ ಸಂತಾಪ ಸೂಚಿಸಿದ ಮೋದಿ
'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತವರಾದ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮಂಗಳೂರು, ಫೆಬ್ರವರಿ 17: ಯಕ್ಷಗಾನದ ದಂತಕಥೆಯೆನಿಸಿದ್ದ ಬಲಿಪ ನಾರಾಯಣ ಭಾಗವತರು(86) ಫೆಬ್ರವರಿ 16ರಂದು ವಿಧಿವಶರಾಗಿದ್ದಾರೆ. 'ಬಲಿಪ' ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸಿ ಆ ಪರಂಪರೆಗೆ ಮೆರುಗು ತಂದ ತೆಂಕುತಿಟ್ಟಿನ ಮೇರು ಭಾಗವತರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
Shri Balipa Narayana Bhagawatha made a mark in the world of culture. He devoted his life towards Yakshagana playback singing and was admired for his exemplary style. His works will be admired by the coming generations. Pained by his demise. Condolences to his family. Om Shanti.
— Narendra Modi (@narendramodi) February 17, 2023
'ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಯಕ್ಷಗಾನದ ಹಿನ್ನೆಲೆ ಗಾಯನ ಭಾಗವತಿಕೆಗಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅನುಕರಣೀಯ ಜೀವನ ಶೈಲಿ ಮೂಲಕ ಎಲ್ಲರ ಮೆಚ್ಚುಗೆ ಪಡೆದವರು. ಅವರ ಕಾರ್ಯಗಳು ಮುಂದಿನ ಪೀಳಿಗೆಗೆ ಸ್ಫೂರ್ತಿ. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ತಂದೆ ಮಾಧವ ಭಟ್ಟರಿಂದ ಯಕ್ಷಗಾನ ಭಾಗವತಿಕೆಯನ್ನು ಕಲಿತ ಬಲಿಪ ನಾರಾಯಣ ಭಾಗವತರು ಅನಂತರ ತಮ್ಮ ಅಜ್ಜ ಬಲಿಪ ಭಾಗವತರಿಂದ ಭಾಗವತಿಕೆಯ, ಯಕ್ಷಗಾನ ನಡೆಯ ಪಟ್ಟುಗಳನ್ನು ಕರಗತ ಮಾಡಿಕೊಂಡರು. 1952ರಲ್ಲಿ ಮುಲ್ಕಿ ಮೇಳದಲ್ಲಿ ಸಂಗೀತಗಾರರಾಗಿ ಯಕ್ಷ ಪಯಣವನ್ನು ಆರಂಭಿಸಿದರು. ಬಳಿಕ ಕೂಡ್ಲು ಮೇಳದಲ್ಲಿ ಸಂಗೀತಗಾರರಾಗಿ ತಿರುಗಾಟ ಮಾಡಿದರು. 1953ರಲ್ಲಿ ಭಗವತಿ ಮೇಳದಲ್ಲಿ ಭಾಗವತರಾಗಿ ತಿರುಗಾಟ ಮಾಡಿ ಬಳಿಕ ಪೆಡ್ರೆ ಜಟಾಧಾರಿ ಮೇಳ, ಕೂಡ್ಲು, ಇರಾ, ರೆಂಜಾಳ, ಸೌಕೂರು, ಧರ್ಮಸ್ಥಳ, ಸುರತ್ಕಲ್ ಮೇಳಗಳಲ್ಲಿ ಸೇವೆ ಸಲ್ಲಿಸಿದರು. 1972ರಲ್ಲಿ ಕಟೀಲು ಮೇಳ ಸೇರಿದ ಅವರು 2003ರವರೆಗೆ ದೀರ್ಘಾವಧಿ ಕಾಲ ಪ್ರಧಾನ ಭಾಗವತರಾಗಿ ತಿರುಗಾಟ ನಡೆಸಿದ್ದರು. ಹಲವಾರು ಯಕ್ಷಗಾನ ಪ್ರಸಂಗಗಳು ಇವರಿಗೆ ಕಂಠಸ್ಥವಾಗಿತ್ತು. ರಂಗಸ್ಥಳದಲ್ಲಿ ಇವರ ಕಂಚಿನ ಕಂಠವನ್ನು ಆಲಿಸಲೆಂದೇ ಯಕ್ಷ ರಸಿಕರು ಭಾರೀ ಸಂಖ್ಯೆಯಲ್ಲಿ ಸೇರುತ್ತಿದ್ದರು.












Click it and Unblock the Notifications