ಮೋದಿ ಪ್ರಯಾಣಕ್ಕೆ ಮಂಗಳೂರಿಗೆ ಬಂದ ವಿಶೇಷ ಕಾರು

ಮಂಗಳೂರು, ಅಕ್ಟೋಬರ್ 27: ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅವರ ಭದ್ರತೆಗೆ ವಿಶೇಷ ಗಮನ ಹರಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರ ಪ್ರವಾಸ ಸಂದರ್ಭದಲ್ಲಿ ಬಳಸುವ ವಿಶೇಷ ಕಾರು ಈಗಾಗಲೇ ಮಂಗಳೂರು ತಲುಪಿವೆ.

ವಾಯುಪಡೆಯ ವಿಶೇಷ ವಿಮಾನದಲ್ಲಿ ಈ ಕಾರುಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿವೆ.

In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ

PM Narendra Modi's special car reached Mangaluru

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ನಂತರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಿ ದರ್ಶನ ಪಡೆಯಲಿರುವ ಪ್ರಧಾನಿ ನರೇಂದ್ರ ಮೋದಿ, ನಂತರ ಉಜಿರೆಯಲ್ಲಿ ನಡೆಯಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

PM Narendra Modi's special car reached Mangaluru

ಈ ಎಲ್ಲಾ ಕಡೆ ತೆರಳಲು ಪ್ರಧಾನಿ ನರೇಂದ್ರ ಮೋದಿ ಈ ವಿಶೇಷ ಕಾರುಗಳನ್ನು ಬಳಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಈಗಾಗಲೇ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಅವರ ಭದ್ರತೆಯ ಹೊಣೆ ಹೊತ್ತಿರುವ ಎಸ್.ಪಿ.ಜಿ ತಂಡ ಈಗಾಗಲೇ ಧರ್ಮಸ್ಥಳದಲ್ಲಿ ಬೀಡು ಬಿಟ್ಟಿದ್ದು ಭದ್ರತೆಯ ಪರಿಶೀಲನೆ ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+