Breaking: ಪ್ರಧಾನಿ ಮೋದಿ ಕರಾವಳಿ ಅಭಿವೃದ್ಧಿಗೆ ಶಕ್ತಿ ತುಂಬಲಿದ್ದಾರೆ

ಮಂಗಳೂರು, ಸೆಪ್ಟೆಂಬರ್ 02: ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತುಂಬಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಪಸ್ಥಿತಿಯ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಬಸವರಾಜ ಬೊಮ್ಮಾಯಿ ಮಂಗಳೂರಿಗೆ ತೆರಳಿದ್ದರು. ಈ ವೇಳೆ ಇಲ್ಲಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಬಹಳ ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಬರುವ ಮುನ್ನವೇ ಹಲವಾರು ಯೋಜನೆಗಳಿಗೆ ಮಂಜೂರಾತಿ ನೀಡಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಟ್ಟು ಅಂದಾಜು 3,800 ಕೋಟಿ ರೂ.ಗಳ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆ ಇವಾಗಿವೆ. ಇವೆಲ್ಲ ಕರಾವಳಿ ಆರ್ಥಿಕ ಚಟುವಟಿಕೆ ಮತ್ತು ಬಂದರುಗಳ ಸಾಮರ್ಥ್ಯ ಹಾಗೂ ವ್ಯವಹಾರಗಳನ್ನು ಹೆಚ್ಚಿಸುವ, ಉದ್ಯೋಗವನ್ನು ವೃದ್ಧಿಸುವ ಯೋಜನೆಗಳೇ ಆಗಿರಲಿವೆ.

PM Narendra Modi to boost coastal development says CM Bommai

ಕರ್ನಾಟಕಕ್ಕೆ 100 ಅಡಿ ಆಳ ಸಮುದ್ರ ಮೀನುಗಾರಿಕೆ ದೋಣಿಗಳನ್ನು ಪ್ರಧಾನಮಂತ್ರಿ 'ಮತ್ಸ್ಯ ಸಂಪದ' ಯೋಜನೆಯಡಿ ಮಂಜೂರು ಮಾಡಿದ್ದಾರೆ. ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿಸ್ತರಣೆ ಮಾಡಿದ್ದಾರೆ. ಸಾಲದೆಂಬಂತೆ ರಾಜ್ಯ ಸರ್ಕಾರವೂ ಕರಾವಳಿ ಭಾಗದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಎಲ್ಲಾ ಯೋಜನೆಗಳಿಗೆ ಇಂದು ಪ್ರಧಾನ ಮಂತ್ರಿಗಳು ಚಾಲನೆ ನಿಡಲಿದ್ದಾರೆ ಎಂದು ಅವರು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+