ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆ.2ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ;ಕಮಲ ಪಾಳಯಕ್ಕೆ ಬೂಸ್ಟ್!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್‌ 22: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ಕ್ಕೆ ಕಡಲ ನಗರಿ ಮಂಗಳೂರಿಗೆ ಆಗಮಿಸಲಿದ್ದಾರೆ. ಎಂಎನ್ಎಂಪಿಟಿಯಲ್ಲಿ ಸಾಗರಮಾಲಾ ಯೋಜನೆಗೆ ಚಾಲನೆ ನೀಡಲಿದ್ದಾರೆ‌ ಎಂದು ತಿಳಿದುಬಂದಿದೆ. ಆ ಬಳಿಕ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ‌.

ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸು ತಂದಿದೆ. ಈಗಾಗಲೇ ದಕ್ಷಿಣ ಕ‌ನ್ನದ ಜಿಲ್ಲೆಯ ಪ್ರತೀ ತಾಲೂಕಿನಿಂದ 25 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬಿಜೆಪಿ ಸೂಚನೆ ನೀಡಿದೆ.

ತಾತನ ತೆಲುಗು ದೇಶಂ ಪಾರ್ಟಿ ಕಟ್ಟಲು ಜೆ. ಎನ್‌ಟಿಆರ್ ರಾಜಕೀಯಕ್ಕೆ ಇಳಿತಾರಾ?ತಾತನ ತೆಲುಗು ದೇಶಂ ಪಾರ್ಟಿ ಕಟ್ಟಲು ಜೆ. ಎನ್‌ಟಿಆರ್ ರಾಜಕೀಯಕ್ಕೆ ಇಳಿತಾರಾ?

ಪ್ರವೀಣ್ ನೆಟ್ಟಾರು ಹತ್ಯೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಕಾರ್ಯಕರ್ತರೇ ಬಹಿರಂಗವಾಗಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಸಿಎಂ ಬೊಮ್ಮಾಯಿ ಬಂದಾಗಲೂ ಕಾರ್ಯಕರ್ತರು ಅವರ ವಿರುದ್ಧವೇ ಘೋಷಣೆ ಕೂಗಿದ್ದರು. ಆ ಬಳಿಕದ ಬಿಜೆಪಿ ಆಂತರಿಕ ಸಮೀಕ್ಷೆಯಲ್ಲೂ ಬಿಜೆಪಿಗೆ ಸೋಲುವ ಭೀತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ರಾಜ್ಯ ಬಿಜೆಪಿಗೆ ಬೂಸ್ಟ್ ನೀಡುವಂತಿದೆ. ಪ್ರಧಾನಿ ಕಾರ್ಯಕ್ರಮ ವಿವರಗಳು ಅಧಿಕೃತವಾಗಿ ಇನ್ನಷ್ಟೇ ಬರಬೇಕಿದೆ.

PM Narendra Modi to Visit Mangaluru on september-2

ಬಿಜೆಪಿಗೆ ತೀವ್ರ ಹಿನ್ನಡೆಯನ್ನುಂಟು ಮಾಡಿರುವ ಕಾರ್ಯಕರ್ತರ ಅಸಮಧಾನಗಳಿಗೆ ಫುಲ್ ಸ್ಟಾಪ್ ಹಾಕಿ, ಕರಾವಳಿ ಭದ್ರಕೋಟೆಯನ್ನು ಮತ್ತಷ್ಚು ಭದ್ರಪಡಿಸಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಇದಕ್ಕಾಗಿ ಮಂಗಳೂರಿನ ಹೊರವಲಯದಲ್ಲಿ ಮೋದಿ ಕಾರ್ಯಕ್ರಮಕ್ಕಾಗಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

English summary
Prime Minister Narendra Modi will visit Mangaluru on September 2 to inaugurate Sagara Mala project,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X