ಅಕ್ಟೋಬರ್ 29ಕ್ಕೆ ಧರ್ಮಸ್ಥಳಕ್ಕೆ ನರೇಂದ್ರ ಮೋದಿ
ಮಂಗಳೂರು, ಅಕ್ಟೋಬರ್ 19 : ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 29ರಂದು ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳೂರು ವಿಮಾಣ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ.

ಆ ಬಳಿಕ ಉಜಿರೆಯಲ್ಲಿ ನಡೆಯುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್ 22ರಂದು ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಲಾಭಾಂಶ ವಿತರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications