ಸಾಮೂಹಿಕ ಅತ್ಯಾಚಾರದ ವಿಡಿಯೋ ವೈರಲ್ ಮಾಡಿದ ಮತ್ತೆ ಮೂವರ ಬಂಧನ

ಮಂಗಳೂರು, ಜುಲೈ 6: ಪುತ್ತೂರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದ ವಿಡಿಯೋ ವೈರಲ್ ಮಾಡಿದ್ದು, ಸು ಮೋಟೊ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ವಿಡಿಯೋ ವೈರಲ್ ಮಾಡುವವರ ವಿರುದ್ಧ ಸು ಮೋಟೊ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು. ಈ ಕುರಿತು ತನಿಖೆ ನಡೆಸುತ್ತಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಶೌಕತ್ ಆಲಿ (34), ನಜೀರ್ (33), ಜಾಬಿರ್ (26) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಪುತ್ತೂರು ಗ್ಯಾಂಗ್ ರೇಪ್ ಪ್ರಕರಣ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎಂದು ಆರೋಪಿಸಲಾಗಿದೆ. ಪುತ್ತೂರು ನಗರ ಪೊಲೀಸರು ಈ ಮೊದಲು ಗ್ಯಾಂಗ್ ರೇಪ್ ವಿಡಿಯೋ ಫಾರ್ವರ್ಡ್ ಮಾಡುತ್ತಿರುವ 8 ಜನರನ್ನು ಬಂಧಿಸಿದ್ದರು. ವಿಡಿಯೋ ಫಾರ್ವರ್ಡ್ ವಿಚಾರದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿದೆ.

police arrested 3 for circulating gang rape video in mangaluru

ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಆಕೆಯ 5 ಮಂದಿ ಸಹಪಾಠಿಗಳು ಕಳೆದ ಫೆಬ್ರವರಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅತ್ಯಾಚಾರದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+