ಗೂಡಿನಬಳಿಯಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮೂವರ ಬಂಧನ

ಮಂಗಳೂರು, ಸೆಪ್ಟೆಂಬರ್. 21: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ ಈ ಕೃತ್ಯ ನಡೆದಿದ್ದು, 4ನೇ ತರಗತಿ ಓದುತ್ತಿರುವ 9 ವರ್ಷ ಪ್ರಾಯದ ಅಪ್ರಾಪ್ತ ಬಾಲೆಯ ಮೇಲೆ ಬಂಧಿತ ಮೂರು ಮಂದಿ ಆರೋಪಿಗಳು ಸರಣಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತರನ್ನು ಗೂಡಿನಬಳಿ ನಿವಾಸಿಗಳಾದ ಗುಜರಿ ವ್ಯಾಪಾರಿ ಶೇಖಬ್ಬ (65) ಅಂಬಾರಿ ಯಾನೆ ರಝಾಕ್ (35) ಹಾಗೂ ನವಾಝ್ (22) ಎಂದು ಗುರುತಿಸಲಾಗಿದೆ.

Police arrested 3 men for rape a minor girl

ಬಂಟ್ವಾಳ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ 4 ನೇ ತರಗತಿಯಲ್ಲಿ ಓದುತ್ತಿರುವ 9 ರ ಹರೆಯದ ಬಾಲಕಿ ಇತ್ತೀಚೆಗೆ ಗೂಡಿನಬಳಿಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಈ ಸಂದರ್ಭದಲ್ಲಿ ಮನೆಯ ನೆರೆಯ ಮಕ್ಕಳೊಂದಿಗೆ ಆಡಿಕೊಂಡಿದ್ದ ಬಾಲಕಿಯನ್ನು ಆರೋಪಿ ರಝಾಕ್ ಮನೆಯ ಮಾಳಿಗೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ.

ನಂತರ ಮತ್ತೊಬ್ಬ ಆರೋಪಿ ಗುಜರಿ ವ್ಯಾಪಾರಿ ಶೇಖಬ್ಬ ಹೊಸ ಕಟ್ಟಡವೊಂದಕ್ಕೆ ಕರೆದುಕೊಂಡು ಹೋಗಿ ಆತ ಹಾಗೂ ಇನ್ನೊಬ್ಬ ಆರೋಪಿ ನವಾಝ್ ಲೈಂಗಿಕ ಕಿರುಕುಳ ನೀಡಿದರು ಎಂದು ಬಾಲಕಿ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾಳೆ. .

ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬಾಲಕಿಗೆ ಬೆದರಿಕೆ ಒಡ್ಡಿದ್ದರು ಎಂದು ಹೇಳಲಾಗಿದೆ.

ಬಾಲಕಿಯ ವರ್ತನೆ ಹಾಗೂ ದೇಹದಲ್ಲಿ ಉಂಟಾದ ಕೆಲವೊಂದು ಬೆಳವಣಿಗೆಗಳನ್ನು ಗಮನಿಸಿ ಮನೆಯವರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಅತ್ಯಾಚಾರ ಮಾಡಿರುವುದು ಬೆಳಕಿಗೆ ಬಂದಿದೆ. ಬಂಟ್ವಾಳ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+