ದೈವ ಪಾತ್ರಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು:ಐವರ ಬಂಧನ
ಮಂಗಳೂರು, ಮೇ 16: ಸಲಿಂಗಕಾಮದ ಆರೋಪದಡಿ ದೈವ ಪಾತ್ರಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೈವ ಪಾತ್ರಿ ಸಹಿತ 5 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಬಿಕರ್ನಕಟ್ಟೆಯ ದೈವ ಪಾತ್ರಿಯ ಮೇಲೆ ಹಲ್ಲೆ ನಡೆಸಿ ತಲೆ ಬೋಳಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಈ ಹಲ್ಲೆ ಪ್ರಕರಣದ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಆರಂಭಿಸಿದ್ದರು .
ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರ ಸೂಚನೆಯಂತೆ ಬರ್ಕೆ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು. ಈ ಪ್ರಕರಣದ ಕುರಿತು ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದು, ಈಗ ದೈವ ಪಾತ್ರಿ ಸಹಿತ 5 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ಅಸಹಜ ಲೈಂಗಿಕ ಕ್ರಿಯೆ ನಡೆಸಿರುವುದನ್ನು ದೈವ ಪಾತ್ರಿ ಒಪ್ಪಿಕೊಂಡಿದ್ದು, ಆತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಕಾನೂನು ಕೈಗೆತ್ತಿಕೊಂಡು ಆತನ ಮೇಲೆ ಹಲ್ಲೆ ಮಾಡಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಹಲ್ಲೆ ನಡೆಸಿದವರ ವಿರುದ್ಧ ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ದೈವ ಪಾತ್ರಿ ಲೋಕೇಶ್ ಪೂಜಾರಿ ಓರ್ವ ಬಾಲಕನ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ನಡೆಸಿ, ಕೈಯ್ಯಲ್ಲಿದ್ದ ಕಡಗವನ್ನು ತೆಗೆಸಿ, ತಲೆಕೂದಲು ಕತ್ತರಿಸಲಾಗಿತ್ತು.












Click it and Unblock the Notifications