ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ 50 ಮಂದಿ ಕೇರಳ ಪತ್ರಕರ್ತರ ಬಿಡುಗಡೆ

ಮಂಗಳೂರು, ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿನ್ನೆ ಮಂಗಳೂರಿನಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ನಿಯಂತ್ರಣಕ್ಕೆ ಗೋಲಿಬಾರ್ ನಡೆದಿದ್ದು, ಇಬ್ಬರು ಪ್ರತಿಭಟನಾಕಾರರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೆ ಇಂದು ಕೇರಳದಿಂದ ಬಂದ ಐವತ್ತು ಮಂದಿ ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ಇಬ್ಬರ ಮೃತದೇಹವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಈ ಸಂದರ್ಭ ಆಸ್ಪತ್ರೆ ಪ್ರವೇಶಿಸಲು ಬಂದಿದ್ದ ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇಂದು ಬೆಳಿಗ್ಗೆ ಐವತ್ತು ಮಂದಿ ಕೇರಳದ ಪತ್ರಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಿನ್ನೆ ಗೋಲಿಬಾರ್ ನಲ್ಲಿ ಸಾವನ್ನಪ್ಪಿದ್ದ ಪ್ರತಿಭಟನಾಕಾರರ ಕುಟುಂಬದವರ ಸಂದರ್ಶನಕ್ಕೆಂದು ಬಂದಿದ್ದ ಈ ಪತ್ರಕರ್ತರು ವೆನ್ಲಾಕ್ ಆಸ್ಪತ್ರೆ ಪ್ರವೇಶಿಸುವ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದರು. ಪತ್ರಕರ್ತರು ಎನ್ನುವುದಕ್ಕೆ ಸೂಕ್ತ ದಾಖಲೆಗಳು ಸಿಗದ ಕಾರಣ ತಕ್ಷಣವೇ ಅವರಿಗೆ ತಡೆ ನೀಡಲಾಗಿತ್ತು. ಪರಿಶೀಲನೆ ನಂತರ ಆ ಐವತ್ತು ಮಂದಿಯನ್ನೂ ಬಿಡುಗಡೆಗೊಳಿಸಲಾಗಿದೆ.

Police Arrested 50 Persons Who Come From Kerala In Mangaluru

ಪತ್ರಕರ್ತರನ್ನು ನಕಲಿ ಪತ್ರಕರ್ತರು ಎಂದು ಬಿಂಬಿಸಿ ವಶಕ್ಕೆ ಪಡೆದ ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+