• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ; ಮತ್ತಿಬ್ಬರ ಬಂಧನ

By Lekhaka
|

ಮಂಗಳೂರು, ನವೆಂಬರ್ 3: ತುಳುನಟ ಸುರೇಂದ್ರ ಬಂಟ್ವಾಳ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತಿಬ್ಬರನ್ನು ಬಂಧಿಸಲಾಗಿದೆ.

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಪ್ರತೀಕ್ ಬೆಳ್ತಂಗಡಿ ಹಾಗೂ ಜಯಶ್ ಎಂಬ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಟ ಸುರೇಂದ್ರ ಬಂಟ್ವಾಳ್ ಕೊಲೆ ಪ್ರಕರಣಕ್ಕೆ ಮತ್ತೊಂದು ತಿರುವು

ಅಕ್ಟೋಬರ್ 20ರಂದು ಬಂಟ್ವಾಳದ ಬಿ.ಸಿ.ರಸ್ತೆಯಲ್ಲಿರುವ ಫ್ಲಾಟ್ ನಲ್ಲಿ ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ಪಿ ಬಿಎಂ ಲಕ್ಷ್ಮಿಪ್ರಸಾದ್ ಅವರ ನೇತೃತ್ವದಲ್ಲಿ ಐದು ವಿಶೇಷ ಪತ್ತೆ ತಂಡವನ್ನು ರಚಿಸಲಾಗಿತ್ತು.

ಈ ಕೊಲೆ ಪ್ರಕರಣದ ಆರೋಪಿಗಳಾದ ಸತೀಶ್ ಕುಲಾಲ್, ಗಿರೀಶ್ ಕಿನ್ನಿಗೋಳಿ, ಆಕಾಶ್ ಭವವ್ ಶರಣ್, ವೆಂಕಟೇಶ್ ಪೂಜಾರಿ, ಪ್ರದೀಪ್, ಶರೀಫ್, ದಿವರಾಜ್, ರಾಜೇಶ್ ಮತ್ತು ಅನಿಲ್ ಪಂಪ್ ವೆಲ್ ಎಂಬುವರನ್ನು ಅಕ್ಟೋಬರ್ 25ರಂದು ಬಂಟ್ವಾಳ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದರು. ಇದೀಗ ಈ ಒಂಬತ್ತು ಮಂದಿಯೊಂದಿಗೆ, ಈ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮತ್ತಿಬ್ಬರನ್ನು ಬಂಧಿಸಲಾಗಿದೆ.

English summary
Two persons were arrested on Tuesday in connection with the murder of Tulu actor Surendra Bantwal. Prateek Belthangady and Jayash have been arrested,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X