ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಫಾಜಿಲ್‌ ಹತ್ಯೆ: ಆರೋಪಿಗಳ ಪ್ಲಾನ್ ವಿವರಿಸಿದ ಪೊಲೀಸ್ ಆಯುಕ್ತರು

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಆಗಸ್ಟ್‌ 2: ನಗರದ ಸುರತ್ಕಲ್‌ನಲ್ಲಿ ನಡೆದಿದ್ದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ಪೊಲೀಸ್ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಕಾಟಿಪಳ್ಳ (23), ಅಭಿಷೇಕ್ (23) ದೀಕ್ಷಿತ್ ಕಾಟಿಪಳ್ಳ (21), ಸುಹಾಸ್ ( 29), ಮೋಹನ್ (23) ಮತ್ತು ಗಿರೀಶ್ (27) ಎಂಬುವವರೇ ಬಂಧಿತ ಆರೋಪಿಗಳು ಎಂದು ಮಾಹಿತಿ ನೀಡಿದರು.

Breaking: ಪ್ರವೀಣ್ ನೆಟ್ಟಾರು ಹತ್ಯೆ, ಮತ್ತಿಬ್ಬರು ಆರೋಪಿಗಳ ಬಂಧನBreaking: ಪ್ರವೀಣ್ ನೆಟ್ಟಾರು ಹತ್ಯೆ, ಮತ್ತಿಬ್ಬರು ಆರೋಪಿಗಳ ಬಂಧನ

ಬಂಧಿತರೆಲ್ಲರೂ ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ ಎಂದು ತಿಳಿದುಬಂದಿದೆ. ಬಜಪೆಯ ಸುಹಾಸ್ ಶೆಟ್ಟಿ ಎಂಬಾತ ಅಭಿಷೇಕ್ ಮೂಲಕ ಹತ್ಯೆಗೆ ಮೊದಲು ಸ್ಕೆಚ್ ಹಾಕಿದ್ದಾರೆ. ಜುಲೈ 27ರಂದು ಸುರತ್ಕಲ್‌ನ ಒಂದು ಜಾಗದಲ್ಲಿ ಅಭಿಷೇಕ್, ಶ್ರೀನಿವಾಸ ಹಾಗೂ ಉಳಿದವರನ್ನ ಸೇರಿಸಿ ಹತ್ಯೆಗೆ ಸಂಚು ರೂಪಿಸಿದ್ದಾನೆ. ಮೋಹನ್ ಮತ್ತು ಗಿರಿಧರ್ ಮಧ್ಯಾಹ್ನದ ವೇಳೆಗೆ ಅಜಿತ್ ಕ್ರಾಸ್ತಾ ಅವರ ಕಾರನ್ನು 15 ಸಾವಿರ ರೂಪಾಯಿಗೆ ಡೀಲ್ ಮಾಡಿ ತರುತ್ತಾರೆ ಎಂದರು.

Police arrests 6 more accused in Fazil Murder case

ಜುಲೈ 27 ರಂದು ಮಧ್ಯಾಹ್ನ ಮೋಹನ್ ಮತ್ತು ಗಿರಿಧರ್ ಕಾರು ತೆಗೊಂಡು ಬಂದಿದ್ದಾರೆ. ಗಿರಿಧರ್ ಇಯಾನ್ ಕಾರನ್ನು ಡ್ರೈವ್ ಮಾಡಿಕೊಂಡು ಬಂದರೆ, ಸುಹಾಸ್, ಮೋಹನ್, ಅಭಿಷೇಕ್ ಟಾರ್ಗೆಟ್ ಪ್ಲಾನ್ ಮಾಡಿದ್ದಾರೆ. ಫಾಜಿಲ್ ಟಾರ್ಗೆಟ್ ಮಾಡಿದ ಆರೋಪಿಗಳು, ಆ ಬಳಿಕ ಮಂಕಿಕ್ಯಾಪ್ ರೆಡಿ ಮಾಡಿ ಸುರತ್ಕಲ್ ಹೊರವಲಯದ ಆ ಬಳಿಕ ಊಟ ಮಾಡಿ ಹತ್ಯೆಗೆ ಸಿದ್ದತೆ ನಡೆಸಿದ್ದಾರೆ.

Breaking: ಫಾಜಿಲ್ ಹತ್ಯೆ ಪ್ರಕರಣ, 6 ಆರೋಪಿಗಳ ಬಂಧನBreaking: ಫಾಜಿಲ್ ಹತ್ಯೆ ಪ್ರಕರಣ, 6 ಆರೋಪಿಗಳ ಬಂಧನ

ಫಾಜಿಲ್ ಹತ್ಯೆಗೂ ಮುನ್ನ ‌ಸುರತ್ಕಲ್‌ನಲ್ಲಿ ಹತ್ಯೆಯಾದ ಜಾಗದಲ್ಲಿ ಎಲ್ಲಾ ಆರೋಪಿಗಳು ಮೂರು‌ ಬಾರಿ ಆರೋಪಿಗಳು ಓಡಾಟ ಮಾಡಿದ್ದಾರೆ. ಸಂಜೆ ಆರು ಜನರು ಕಾರಿನಲ್ಲಿ ಬಂದು ಫಾಜಿಲ್​ ಬರುವಿಕೆಗಾಗಿ ಕಾಯುತ್ತಿರುತ್ತಾರೆ. ಸರಿಯಾದ ಸ್ಥಳದಲ್ಲಿ ಫಾಜಿಲ್ ಕಣ್ಣಿಗೆ ಬೀಳುತ್ತಿದ್ದಂತೆ ಶ್ರೀನಿವಾಸ, ಮೋಹನ್ ಮತ್ತು ಸುಹಾಸ್ ಮಾರಕಾಸ್ತ್ರ ಹಿಡಿದು ಫಾಜಿಲ್ ಮೇಲೆ ದಾಳಿ ಮಾಡಿದ್ದಾರೆ.

ಕೃತ್ಯದ ವೇಳೆ ಗಿರಿಧರ್ ಕಾರು ಚಾಲಕನಾಗಿದ್ದನು, ದೀಕ್ಷಿತ್ ಕಾರಿನಲ್ಲೇ ಕುಳಿತಿದ್ದನು, ಅಭಿಷೇಕ್ ಕಾರಿನಿಂದ ಪರಾರಿಯಾಗುವ ಸಂದರ್ಭದಲ್ಲಿ ಯಾರು ಕೂಡ ಅಡ್ಡಿ ಬರಬಾರದೆಂದು ಕಾರಿನ ಬಳಿ ನಿಲ್ಲುತ್ತಾನೆ ಎಂದು ಆಯುಕ್ತರು ವಿವರಿಸಿದರು.

Police arrests 6 more accused in Fazil Murder case

ಕೃತ್ಯ ನಡೆಸಿದ ಬಳಿಕ ಕಾರಿನಲ್ಲೇ ಪರಾರಿಯಾದ ಆರೋಪಿಗಳು ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ, ಸ್ನೇಹಿತನ ಮೂಲಕ ಬೇರೆ ಕಾರೊಂದನ್ನು ತರಿಸಿಕೊಂಡು ಪರಾರಿಯಾಗಿದ್ದಾರೆ. ಉಡುಪಿಯ ಉದ್ಯಾವರ ಬಳಿ ಆರು ಆರೋಪಿಗಳನ್ನ ಬಂಧಿಸಲಾಗಿದೆ. ಸದ್ಯ ಆರೂ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹತ್ಯೆಗೆ ಪ್ರೇಮ ಪ್ರಕರಣ ಮತ್ತು ಫಾಜಿಲ್ ಸಮುದಾಯದವರ ಒಳಗಡೆ ಇರುವ ಪಂಗಡಗಳ ನಡುವೆ ಆದಂತಹ ವ್ಯತ್ಯಾಸಗಳೇ ಕಾರಣ ಎಂಬ ಸುದ್ದಿಗಳು ಹಬ್ಬಿದ್ದವು, ಆದರೆ ಕೃತ್ಯಕ್ಕೆ ಇವ್ಯಾವುದೇ ಕಾರಣಗಳಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಕೆಲವು ರೌಡಿಗಳು ಕೃತ್ಯವನ್ನು ನಾವೇ ಮಾಡಿದ್ದೇವೆ, ನಮ್ಮ ಹುಡುಗರೇ ಮಾಡಿದ್ದಾರೆ ಎಂದು ಹೇಳಿಕೊಂಡು ತಿರುಗಾಡಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಶಶಿಕುಮಾರ್ ತಿಳಿಸಿದ್ದಾರೆ.

English summary
Magngaluru city Police of have arrested 6 more people in connection with the Mohammaed Fazil murder case said commissioner N. Shashikumar on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X