ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು; ವಾಹನ ತಪಾಸಣೆ ವೇಳೆ ಯುವಕ ಸಾವು, ಚೆಕ್ ಪೋಸ್ಟ್ ಧ್ವಂಸ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 29; ಪೊಲೀಸರ ವಾಹನ ತಪಾಸಣೆ ವೇಳೆ ಗೂಡ್ಸ್ ಗಾಡಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿಯ ಆತೂರಿನಲ್ಲಿ ನಡೆದಿದೆ.‌

ಅಪಘಾತದ ಬಳಿಕ ಆಕ್ರೋಶಗೊಂಡ ಸ್ಥಳೀಯರು ಪೊಲೀಸ್ ಚೆಕ್ ಪಾಯಿಂಟ್ ಧ್ವಂಸ ಮಾಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನಲೆಯಲ್ಲಿ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ.

Stories Of Strength: ಕೊರೊನಾ ಗೆದ್ದ ದಕ್ಷಿಣ ಕನ್ನಡದ ಸಿಯೋನ್ ಆಶ್ರಮ ವಾಸಿಗಳುStories Of Strength: ಕೊರೊನಾ ಗೆದ್ದ ದಕ್ಷಿಣ ಕನ್ನಡದ ಸಿಯೋನ್ ಆಶ್ರಮ ವಾಸಿಗಳು

ಅಘಫಾತದಲ್ಲಿ ಮೃತಪಟ್ಟವರನ್ನು ಆತೂರು ಬೈಲು ನಿವಾಸಿ ಹಾರಿಸ್ (33) ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಡೆದಿದ್ದರು.

ದಕ್ಷಿಣ ಕನ್ನಡ; ಜಿಲ್ಲೆಯ ಕಟ್ಟ ಕಡೆ ಹಳ್ಳಿ ತಲುಪಿದ ಲಸಿಕೆ ದಕ್ಷಿಣ ಕನ್ನಡ; ಜಿಲ್ಲೆಯ ಕಟ್ಟ ಕಡೆ ಹಳ್ಳಿ ತಲುಪಿದ ಲಸಿಕೆ

Police Check Post Destroyed In Uppinangady

ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ‌. ಇದರಿಂದಾಗಿ ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.‌‌‌‌

ದಕ್ಷಿಣ ಕನ್ನಡದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿಗಳು ಓಪನ್ ದಕ್ಷಿಣ ಕನ್ನಡದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಅಂಗಡಿಗಳು ಓಪನ್

ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
People destroyed police check post after youth killed in road accident Uppinangady. Dakshina Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X