ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಡಬದಲ್ಲಿ ಮಾನಸಿಕ ಅಸ್ವಸ್ಥನ ಮೇಲೆ ಅಮಾನವೀಯ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ

|
Google Oneindia Kannada News

ಮಂಗಳೂರು, ಏಪ್ರಿಲ್ 22:ಮಾನಸಿಕ ಅಸ್ವಸ್ಥರಾದ ವೃದ್ಧನ ಮೇಲೆ ಪೊಲೀಸ್ ಕ್ರೌರ್ಯ ಎಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕಡಬ ಪೊಲೀಸ್ ಠಾಣೆ ಎದುರು ಈ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥನ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರಿಗೆ ಕರುಣೆ ಇಲ್ಲ. ಹೃದಯ ಇಲ್ಲದ ಕಟುಕರು ಎಂಬ ಮಾತಿದೆ. ಈ ಮಾತನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಅಕ್ಷರಶಃ ಸತ್ಯವಾಗಿಸಿದ್ದಾರೆ. ಕಡಬ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ವೃದ್ಧ ಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ ಮಾಡುವ ಮೂಲಕ ಈ ಮಾತನ್ನು ನಿಜಗೊಳಿಸಿದ್ದಾರೆ.

ಮಂಗಳೂರು : ಯುವಕನ ಮೇಲೆ ಪೊಲೀಸರ ದೌರ್ಜನ್ಯ?ಮಂಗಳೂರು : ಯುವಕನ ಮೇಲೆ ಪೊಲೀಸರ ದೌರ್ಜನ್ಯ?

ಮಾನಸಿಕ ಅಸ್ವಸ್ಥರಾದ ವೃದ್ಧ ವ್ಯಕ್ತಿ ಯಾರಿಗೋ ಬೈಯುತ್ತ ಕೈಯ್ಯಲ್ಲಿ ಕಲ್ಲು ಹಿಡಿದುಕೊಂದಿದ್ದ ಎನ್ನುವ ಕಾರಣಕ್ಕೆ ಆತನನ್ನು ಕಡಬ ಠಾಣೆಯ ಸಿಬ್ಬಂದಿ ಪಂಪಾಪತಿ ಎಂಬುವವರು ಲಾಠಿಯಿಂದ ಹೊಡೆದು ಸುಡು ಬಿಸಿಲಿನಲ್ಲಿ ನೆಲಕ್ಕೆ ಕೆಡವಿ ಕಾಲಿನಿಂದ ತುಳಿದಿದ್ದಾರೆ. ಈ ದೃಶ್ಯವನ್ನು ಅಲ್ಲೇ ದಾರಿಹೋಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

Police harassment on old age man

ಮಾನಸಿಕ ಅಸ್ವಸ್ಥನನ್ನು ಥಳಿಸುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸ್ ಸಿಬ್ಬಂದಿಯ ಈ ವರ್ತನೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Police harassment on old age man

ಕಡಬ ಜಾತ್ರೆಯ ಪ್ರಯುಕ್ತ ದೇವರ ಮೆರವಣಿಗೆ ಕಡಬ ಪೇಟೆಯ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಪಂಪಾಪತಿ ವಿರುದ್ಧ ಮೇಲಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.

English summary
Police constable of Kadaba police station harassed old age man one who suffering from mental illness. Now Video of this incident viral on social media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X