ದೂರು ನೀಡಲು ಬಂದ ಬಾಲಕಿ ಜೊತೆ ಹೆಡ್ ಕಾನ್ಸ್ಟೆಬಲ್ ಅನುಚಿತ ವರ್ತನೆ; ಬಂಧನ
ಮಂಗಳೂರು, ಜುಲೈ 28: ಆಟೋ ಚಾಲಕನಿಂದಾದ ಕಿರುಕುಳದ ಬಗ್ಗೆ ಹೆತ್ತವರ ಜೊತೆಗೆ ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ಬಾಲಕಿಯ ಜೊತೆಗೆ ಹೆಡ್ ಕಾನ್ಸ್ಟೆಬಲ್ ಅನುಚಿತವಾಗಿ ವರ್ತಿಸಿರುವ ಘಟನೆ ಮಂಗಳೂರಿನ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೆಬಲ್ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿದೆ.
ಜುಲೈ 26ರಂದು ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ದೂರು ನೀಡಲೆಂದು ಹೆತ್ತವರ ಜೊತೆ ಪೊಲೀಸ್ ಠಾಣೆಗೆ ಬಂದಿದ್ದಳು. ಈ ವೇಳೆ ದೂರು ಪ್ರತಿಯಲ್ಲಿ ಮೊಬೈಲ್ ನಂಬರ್ ಕೂಡಾ ದಾಖಲಿಸಿದ್ದಳು. ಆದರೆ ಈ ನಂಬರ್ನ್ನೇ ಪಡೆದ ಹೆಡ್ ಕಾನ್ಸ್ಟೆಬಲ್ ಬಾಲಕಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾನೆ. ಕರೆ ಮಾಡಿ ಮನೆಗೆ ಬರುವಂತೆ ಒತ್ತಾಯ ಮಾಡಿದ್ದಾನೆ.

ಹೆಡ್ ಕಾನ್ಸ್ಟೆಬಲ್ ಕಿರುಕುಳ ಜೋರಾಗುತ್ತಿದ್ದಂತೆಯೇ ಬಾಲಕಿ ಪೋಷಕರಿಗೆ ಹೇಳಿದ್ದು, ಪೋಷಕರು ಚೈಲ್ಡ್ ವೆಲ್ಫೇರ್ಗೆ ದೂರು ನೀಡಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ಪೊಲೀಸರು ಆರೋಪಿ ಹೆಡ್ ಕಾನ್ಸ್ಟೆಬಲ್ನನ್ನು ಬಂಧಿಸಿದ್ದಾರೆ. ಪೂರಕ ಸಾಕ್ಷ್ಯಾಧಾರಗಳು ಲಭ್ಯವಾಗಿರುವುದರಿಂದ ನೀಚ ಪೊಲೀಸಪ್ಪ ಜೈಲು ಸೇರಿದ್ದಾನೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications