ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಬೈಲಿನಲ್ಲಿ ಮಾತಾಡುತ್ತಾ ಬಸ್ ಓಡಿಸಿದವನಿಗೆ ಬಿತ್ತು 5000 ರೂ ದಂಡ!

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 9: ಮೊಬೈಲಿನಲ್ಲಿ ಮಾತನಾಡುತ್ತಾ ಬಸ್ ಓಡಿಸುತ್ತಿದ್ದ ಖಾಸಗಿ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸರು 5000 ರೂಪಾಯಿ ದಂಡ ವಿಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದಂಡ ಮೊತ್ತ ಹೆಚ್ಚಳ; ಪೆಟ್ರೋಲ್ ಸ್ಥಗಿತಗೊಳಿಸುವ ಎಚ್ಚರಿಕೆದಂಡ ಮೊತ್ತ ಹೆಚ್ಚಳ; ಪೆಟ್ರೋಲ್ ಸ್ಥಗಿತಗೊಳಿಸುವ ಎಚ್ಚರಿಕೆ

ಜೋಕಟ್ಟೆ ಕ್ರಾಸ್ ಬಳಿ ಚಾಲಕ ಮೊಬೈಲಿನಲ್ಲಿ ಮಾತಾಡಿಕೊಂಡು ಬಸ್ ಓಡಿಸುತ್ತಿದ್ದ. ಜೋಕಟ್ಟೆ ಕ್ರಾಸ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಟ್ರಾಫಿಕ್ ಪೊಲೀಸರ ಕಣ್ಣಿಗೆ ಚಾಲಕ ಮೊಬೈಲಿನಲ್ಲಿ ಮಾತನಾಡುತ್ತಿದ್ದ ದೃಶ್ಯ ಬಿದ್ದಿದ್ದು, ಬಸ್ ತಡೆ ಹಾಕಿ, ಐದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಶನಿವಾರ ಸಂಜೆ ಏಳು ಗಂಟೆ ಸುಮಾರಿಗೆ ಬಸ್ ಚಾಲಕನಿಗೆ ದಂಡ ವಿಧಿಸಲಾಗಿದೆ.

Police Imposed 5000 Fine For Using Mobile While Driving Bus In Mangaluru

ನಗರದಲ್ಲಿ ಶನಿವಾರ (ಸೆಪ್ಟೆಂಬರ್ 7) ದಿಂದಲೇ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿದ್ದು, ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ. ಇಷ್ಟು ದಿನ ದಂಡದ ಬಗ್ಗೆ ತಾತ್ಸಾರ ಮಾಡುತ್ತಿದ್ದವರು ಈಗ ವಿಧಿಸುತ್ತಿರುವ ಭಾರೀ ಮೊತ್ತ ನೋಡಿ ದಂಗಾಗಿದ್ದಾರೆ. ಹೆಲ್ಮೆಟ್ ಹಾಕಿಕೊಳ್ಳದಿರುವುದು, ವಾಹನಕ್ಕೆ ವಿಮೆ ಇಲ್ಲದೇ ಓಡಾಡುವುದು, ಚಾಲನೆ ವೇಳೆ ಮೊಬೈಲ್ ನಲ್ಲಿ ಮಾತನಾಡುವುದು, ನೋ ಪಾರ್ಕಿಂಗ್ ನಲ್ಲಿ ವಾಹನ ನಿಲ್ಲಿಸುವುದು... ಹೀಗೆ, ಹಲವು ನಿಯಮಗಳ ಉಲ್ಲಂಘನೆಗೆ, ಪೊಲೀಸರು ಭಾರೀ ದಂಡ ವಿಧಿಸುತ್ತಿದ್ದು, ವಾಹನ ಸವಾರರು ದಂಡದ ಮೊತ್ತ ನೋಡಿ ಶಾಕ್ ಆಗುತ್ತಿದ್ದಾರೆ.

English summary
A private bus driver who was speaking in mobile and driving a bus in Mangalore was fined Rs 5000 by the traffic police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X