ಕರ್ನಾಟಕ-ಕೇರಳ ಗಡಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ

ದಕ್ಷಿಣ ಕನ್ನಡ, ಏಪ್ರಿಲ್ 02: ಕೇರಳ- ಕರ್ನಾಟಕ ಸಂಪರ್ಕಿಸುವ ಗಡಿ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಗಡಿಭಾಗದಲ್ಲಿ ಕರ್ತವ್ಯ ನಿರ್ಹವಣೆ ಮಾಡುತ್ತಿದ್ದ ಕರ್ನಾಟಕದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಶುಕ್ರವಾರ ಸಂಜೆ ಅಪರಿಚಿತ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪೊಲೀಸ್ ಸಿಬ್ಬಂದಿ ಇದರಿಂದಾಗಿ ಗಾಯಗೊಂಡಿದ್ದಾರೆ.

ಕೇರಳ ಕಡೆಯಿಂದ ವಾಹನದಲ್ಲಿ ಬಂದ ಯುವಕರ ತಂಡ ಕರ್ನಾಟಕ ಪ್ರವೇಶ ಮಾಡಲು ಪ್ರಯತ್ನ ನಡೆಸಿತು, ಆಗ ಪೊಲೀಸರು ತಡೆದರು. ಆಗ ಆಕ್ರೋಶಗೊಂಡ ಯುಕವರ ತಂಡ ಪೊಲೀಸರ ಮೇಲೆ ಕಲ್ಲು ತೂರಿತು.

Police Injured In Karnataka Kerala Border

ಕರ್ನಾಟಕ-ಕೇರಳ ಗಡಿಯಲ್ಲಿ ವಾಹನ ಸಂಚರಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೂಚನೆಗಳನ್ನು ನೀಡಿದೆ.

ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿ. ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯ ಇರುವವರನ್ನು ಕರೆತರುವ ಅವಕಾಶ ಮಾಡಿಕೊಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಕೊರೊನಾ ಸೋಂಕು ಹರಡದಂತೆ ತಡೆಯಲು ದೇಶದ ಪ್ರಮುಖ ರಾಜ್ಯಗಳು ಅಂತರರಾಜ್ಯ ಗಡಿ ಬಂದ್ ಮಾಡಿವೆ. ಕರ್ನಾಟಕವೂ ಸಹ ಕೇರಳಕ್ಕೆ ಸಂಪರ್ಕಿಸುವ ಗಡಿಯನ್ನು ಬಂದ್ ಮಾಡಿದೆ. ಆದರೆ, ಈ ವಿಚಾರ ರಾಜಕೀಯ ಸ್ವರೂಪವನ್ನು ಪಡೆದಿದೆ.

ಕರ್ನಾಟಕ-ಕೇರಳ ಗಡಿ ಮಾರ್ಗವನ್ನು ತೆರೆಯುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+