ಗಾಂಜಾ, ದನ ಕಳವು ಪ್ರಕರಣ ತಡೆಗೆ ನಿರ್ಲಕ್ಷ್ಯ; ಇನ್ಸ್ಪೆಕ್ಟರ್ ಅಮಾನತು
ಮಂಗಳೂರು, ಜುಲೈ 10: ಮಂಗಳೂರು ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದಾರೆ. ಮಾದಕ ವಸ್ತುವಿನ ಜಾಲವನ್ನು ಬುಡ ಸಮೇತ ಕಿತ್ತುಹಾಕಲು ಪಣ ತೊಟ್ಟಿರುವ ಪೊಲೀಸರು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುವವರನ್ನು ಬಂಧಿಸುತ್ತಿದ್ದಾರೆ.
ಈ ನಡುವೆ ಮಾದಕ ವಸ್ತು ಜಾಲವನ್ನು ಭೇದಿಸಲು ನಿರ್ಲಕ್ಷ್ಯ ತೋರುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.
ಮಾದಕವಸ್ತು ಪೂರೈಕೆ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಹಾಗೂ ತನ್ನ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣದ ವಿಚಾರದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ.ಕೆ.ರಾಮಕೃಷ್ಣ ಅವರನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನಲ್ಲಿ ಗಾಂಜಾ, ದನಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಮಿಷನರ್ ಸಂದೀಪ್ ಪಾಟೀಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಆದರೆ ಸುರತ್ಕಲ್ ಠಾಣಾ ಇನ್ಸ್ಪೆಕ್ಟರ್ ರಾಮಕೃಷ್ಣ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯಲೋಪವೆಸಗಿದ್ದರು ಎಂಬ ಆರೋಪವಿದೆ. ಇದು ಮಾತ್ರವಲ್ಲದೆ ಹಣಕಾಸು ಸಂಸ್ಥೆಯೊಂದು ವಂಚನೆ ಮಾಡಿದ ಆರೋಪದಲ್ಲಿ ಸಾರ್ವಜನಿಕರು ಠಾಣೆಗೆ ದೂರು ನೀಡಲು ಬಂದಾಗ ಕೇಸು ದಾಖಲಿಸದೆ ಕಳುಹಿಸಿದ್ದರು. ಇದು ಕಮಿಷನರ್ ಅವರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಕೈಗೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications