ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಾಂಜಾ, ದನ ಕಳವು ಪ್ರಕರಣ ತಡೆಗೆ ನಿರ್ಲಕ್ಷ್ಯ; ಇನ್‌ಸ್ಪೆಕ್ಟರ್ ಅಮಾನತು

|
Google Oneindia Kannada News

ಮಂಗಳೂರು, ಜುಲೈ 10: ಮಂಗಳೂರು ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದಾರೆ. ಮಾದಕ ವಸ್ತುವಿನ ಜಾಲವನ್ನು ಬುಡ ಸಮೇತ ಕಿತ್ತುಹಾಕಲು ಪಣ ತೊಟ್ಟಿರುವ ಪೊಲೀಸರು ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುವವರನ್ನು ಬಂಧಿಸುತ್ತಿದ್ದಾರೆ.

ಈ ನಡುವೆ ಮಾದಕ ವಸ್ತು ಜಾಲವನ್ನು ಭೇದಿಸಲು ನಿರ್ಲಕ್ಷ್ಯ ತೋರುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಮಂಗಳೂರು ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

 ಮಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರ ಗುಂಡಿನ ದಾಳಿ ಮಂಗಳೂರಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರ ಗುಂಡಿನ ದಾಳಿ

ಮಾದಕವಸ್ತು ಪೂರೈಕೆ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಹಾಗೂ ತನ್ನ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣದ ವಿಚಾರದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮಂಗಳೂರಿನ ಸುರತ್ಕಲ್ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಕೆ.ಕೆ.ರಾಮಕೃಷ್ಣ ಅವರನ್ನು ಅಮಾನತುಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದಾರೆ.

Police inspector suspended in Mangaluru

ಮಂಗಳೂರಿನಲ್ಲಿ ಗಾಂಜಾ, ದನಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಮಿಷನರ್‌ ಸಂದೀಪ್ ಪಾಟೀಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಆದರೆ ಸುರತ್ಕಲ್ ಠಾಣಾ ಇನ್‌ಸ್ಪೆಕ್ಟರ್ ರಾಮಕೃಷ್ಣ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯಲೋಪವೆಸಗಿದ್ದರು ಎಂಬ ಆರೋಪವಿದೆ. ಇದು ಮಾತ್ರವಲ್ಲದೆ ಹಣಕಾಸು ಸಂಸ್ಥೆಯೊಂದು ವಂಚನೆ ಮಾಡಿದ ಆರೋಪದಲ್ಲಿ ಸಾರ್ವಜನಿಕರು ಠಾಣೆಗೆ ದೂರು ನೀಡಲು ಬಂದಾಗ ಕೇಸು ದಾಖಲಿಸದೆ ಕಳುಹಿಸಿದ್ದರು. ಇದು ಕಮಿಷನರ್‌ ಅವರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಕೈಗೊಂಡಿದ್ದಾರೆ.

English summary
Police Inspector of Surathkal station Ramakrishan has been suspended by Mangaluru police Commissioner sandeep Patil. It is said that Ramakrishna failed to take stringent action against Ganja and illegal cattle trafficking in Surathkal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X