ದೈವ ಪಾತ್ರಿ ಮೇಲೆ ಹಲ್ಲೆ: ಸ್ವಯಂಪ್ರೇರಿತ ದೂರು ದಾಖಲಿಸಿದ ಪೊಲೀಸರು

ಮಂಗಳೂರು, ಮೇ 14:ಮಂಗಳೂರಿನಲ್ಲಿ ದೈವ ಪಾತ್ರಿಯ ಮೇಲೆ ಹಲ್ಲೆ ನಡೆಸಿ ತಲೆ ಬೋಳಿಸಿದ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಹಲ್ಲೆ ಪ್ರಕರಣ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಸಲಿಂಗ ಕಾಮ ಆರೋಪದ ಹಿನ್ನೆಲೆಯಲ್ಲಿ ತಂಡವೊಂದು ದೈವ ಪಾತ್ರಿಯೊಬ್ಬರ ತಲೆ ಬೋಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರ ಸೂಚನೆಯಂತೆ ಬರ್ಕೆ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Police lodged Suo Moto case on Daiva Patri assault case

ಸಲಿಂಗ ಕಾಮದ ಆರೋಪದಡಿ ದೈವಪಾತ್ರಿಯ ತಲೆ ಕೂದಲನ್ನು ಬಲವಂತವಾಗಿ ಕತ್ತರಿಸಿ, ಹಲ್ಲೆ ನಡೆಸಲಾಗಿತ್ತು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Police lodged Suo Moto case on Daiva Patri assault case

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿರುವ ನಗರ ಪೊಲಿಸ್ ಕಮಿಷನರ್ ಸಂದೀಪ್ ಪಾಟೀಲ್, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ.ಈ ಹಿನ್ನೆಲೆಯಲ್ಲಿ ಪೊಲೀಸರೇ ಸ್ವಯಂ ಪ್ರೇರಿತ ದೂರು ದಾಖಲು ಮಾಡಿದ್ದು, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+