• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಪ್ಪಿನಂಗಡಿ ಕಾಲೇಜುಗಳ ಮೇಲೆ ಪೊಲೀಸರ ದಾಳಿ: 24 ಮೊಬೈಲ್ ವಶ

|

ಮಂಗಳೂರು, ಜುಲೈ 9: ಪುತ್ತೂರು ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಕಾಲೇಜು ಆವರಣದಲ್ಲಿ ಮೊಬೈಲ್ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಕಲಿಕಾ ಅವಧಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದೆಂಬ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಠಾಣೆಯ ಪೊಲೀಸರು ತಮ್ಮ ವ್ಯಾಪ್ತಿಯ ಕಾಲೇಜುಗಳಿಗೆ ಹಠಾತ್ ದಾಳಿ ನಡೆಸಿ ವಿದ್ಯಾರ್ಥಿಗಳಿಂದ 24 ಮೊಬೈಲ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಸಾಮೂಹಿಕ ಅತ್ಯಾಚಾರದ ವಿಡಿಯೋ ವೈರಲ್ ಮಾಡಿದ ಮತ್ತೆ ಮೂವರ ಬಂಧನ

ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ನಂದಕುಮಾರ್ ನೇತೃತ್ವದ ಪೊಲೀಸ್ ತಂಡ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳ ಬಳಿ ಮೊಬೈಲುಗಳಿಗಾಗಿ ಶೋಧ ನಡೆಸಿದ್ದರು.

ಈ ಸಂದರ್ಭ ವಿದ್ಯಾರ್ಥಿಗಳಲ್ಲಿದ್ದ 24 ಮೊಬೈಲ್ ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡರು. ಅಲ್ಲದೇ, ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಮುನ್ನ ಅಂಗಡಿಗಳಲ್ಲಿ ಮೊಬೈಲ್ ಇರಿಸುವ ಸುಳಿವು ಪಡೆದುಕೊಂಡ ಪೊಲೀಸರು ಶಂಕಿತ ಅಂಗಡಿಗಳ ಮೇಲೂ ದಾಳಿ ನಡೆಸಿ ತಪಾಸಣೆ ನಡೆಸಿದರು.

English summary
Police have taken seriously the Puttur mass rape video viral case. It is in this connection, the police of Udupinangadi station have raided colleges and seized 24 mobiles from students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X