ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ತವ್ಯದ ವೇಳೆ ಕುಸಿದು ಬಿದ್ದ ಪೊಲೀಸ್ ಸಿಬ್ಬಂದಿ:ಅಸಲಿ ಕಾರಣವೇನು?

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 18: ರಕ್ತದೊತ್ತಡ ಕಡಿಮೆಯಾಗಿ ಕೊಂಬಾರು ಗ್ರಾಮದ ಮುಗೇರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿಕೇರಿ ಮೂಲದ ಪೊಲೀಸ್ ಸಿಬ್ಬಂದಿ ಶ್ರೀನಿವಾಸ್ (42) ಕುಸಿದು ಬಿದ್ದಿದ್ದಾರೆ. ಪರಿಣಾಮ ಅವರ ತಲೆಗೆ ಗಾಯವಾಗಿದ್ದು, ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ನಡುವೆ ಬಿಳಿನೆಲೆ ಮತಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಬೆಳಗಿನ ಉಪಹಾರದಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿದ್ದು, ಆಹಾರವನ್ನು ಸೇವಿಸಿದ ಹಲವರ ಪೈಕಿ ಇಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಕುಟುಂಬ ಸಮೇತರಾಗಿ ಮತದಾನ ಮಾಡಿದ ಸಚಿವ ಸಾ.ರಾ.ಮಹೇಶ್ ಕುಟುಂಬ ಸಮೇತರಾಗಿ ಮತದಾನ ಮಾಡಿದ ಸಚಿವ ಸಾ.ರಾ.ಮಹೇಶ್

ಐವರ್ನಾಡು ನಿವಾಸಿ ಜಯಪ್ರಕಾಶ್ ಗೌಡ(35), ಬೆಳ್ಳಾರೆ ನಿವಾಸಿ ರಾಜೇಂದ್ರ(45) ಉಪಹಾರ ಸೇವಿಸಿ ಅಸ್ವಸ್ಥಗೊಂಡವರು. ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಹೊಟೆಲ್ ನಿಂದ ತರಿಸಲಾಗಿದ್ದು, ಹಲವು ಅಧಿಕಾರಿಗಳು ಇದೇ ಆಹಾರವನ್ನು ಸೇವಿಸಿದ್ದಾರೆ.

Police staff collapsed during duty in Mugeru

ಆದರೆ ಸ್ಥಳೀಯರ ಮಾಹಿತಿ ಪ್ರಕಾರ ಅಸ್ವಸ್ಥಗೊಂಡ ಇಬ್ಬರೂ ಹೊಟೆಲ್ ನಲ್ಲಿ ಉಪಾಹಾರ ಸೇವಿಸಿದ್ದಾರೆ ಎನ್ನಲಾಗಿದ್ದು, ತಟ್ಟೆಯಲ್ಲಿ ಕಂಡು ಬಂದ ಹಲ್ಲಿಯ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಇಬ್ಬರು ಚುನಾವಣಾ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಈ ರೀತಿ ವರ್ತಿಸಿದ್ದಾರೆ ಎಂದು ದೂರಲಾಗಿದೆ.

Police staff collapsed during duty in Mugeru

20 ನಿಮಿಷ ಮತದಾನ ಸ್ಥಗಿತ
ಕಡಬದ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಬೂತ್ ನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಮತಯಂತ್ರ ಕೈಕೊಟ್ಟು ಸುಮಾರು 20 ನಿಮಿಷಗಳ ಕಾಲ ಮತದಾನ ಸ್ಥಗಿತಗೊಂಡಿತು. ಕಡಬ ಗ್ರಾಮದ ಬೂತ್ ಸಂಖ್ಯೆ 90 ರಲ್ಲಿ ಮಹಿಳೆಯರಿಂದಲೇ ನಿರ್ವಹಿಸಲ್ಪಡುವ 'ಸಖಿ' ಮತಗಟ್ಟೆಯನ್ನು ನಿರ್ಮಿಸಲಾಗಿತ್ತು.

English summary
Lok Sabha Election 2019:Police staff collapsed during duty in Mugeru.They were identified as Srinivas (42), resident of Madikeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X