ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದ.ಕ.ದಲ್ಲಿ ಮೋದಿಯನ್ನು ಮತ್ತೆ ಪ್ರಧಾನಿಯಾಗಿಸಲು ಬಿರುಸುಗೊಂಡ ರಾಜಕೀಯ ಚಟುವಟಿಕೆ

|
Google Oneindia Kannada News

ಮಂಗಳೂರು, ಆಗಸ್ಟ್ 05 : ಮುಂಬರುವ 2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಸೋಲಿಸಲು ವಿಪಕ್ಷಗಳ ಮಹಾಘಟ್ಬಂಧನ್ ರಚನೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ. ಇನ್ನೊಂದೆಡೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಚಟುವಟಿಕೆಗಳು ದೇಶದಾದ್ಯಂತ ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳು ಚಾಲನೆ ಪಡೆದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ವಲಯದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಹಾಗೂ ಅಯೋಧ್ಯೆಯಲ್ಲಿ ಶ್ರೀ ರಾಮ‌ಮಂದಿರ ನಿರ್ಮಾಣ ಹಾಗೂ ಅಖಂಡ ಭಾರತ ಸಂಕಲ್ಪದೊಂದಿಗೆ ಕಲ್ಲಡ್ಕ ಶ್ರೀ ರಾಮ ಮಂದಿರ ದಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ಸನ್ನಿದಾನಕ್ಕೆ ಕಾಲ್ನಡಿಗೆ ಯಲ್ಲಿ ತೆರಳಿ‌ ಪ್ರಾರ್ಥನೆ ಸಲ್ಲಿಸಿದರು.

ಕಾನತ್ತೂರು ಕ್ಷೇತ್ರದ ಮೊರೆ ಹೋದ ರಮಾನಾಥ್ ರೈಕಾನತ್ತೂರು ಕ್ಷೇತ್ರದ ಮೊರೆ ಹೋದ ರಮಾನಾಥ್ ರೈ

ಇದಕ್ಕೂ ಮುನ್ನ ಕಲ್ಲಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನೆ ನಡೆಸಿ, ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿ ಕಳೆದ ರಾತ್ರಿ 9 ಗಂಟೆಯ ವೇಳೆಗೆ ಕಾಲ್ನಡಿಗೆಯಲ್ಲಿ ಹೊರಟರು. 150 ಕ್ಕೂ ಅಧಿಕ ಕಾರ್ಯಕರ್ತರು ಈ ಕಾಲ್ನಡಿಗೆಯಲ್ಲಿ ಜೊತೆಯಲ್ಲಿ ಸಾಗಿದರು.

Political activities have been speedily to make Modi become PM again

ವಿಶ್ವ ಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ಕಾ.ಕೃಷ್ಣಪ್ಪ, ಸಂಚಾಲಕ ನವೀನ್‌ ಮಾಪಲ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಡಲ ಕಾರ್ಯವಾಹ ಸುಜಿತ್ ಕೊಟ್ಟಾರಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

English summary
In Dakshina Kannada Political activities have been speedily to make Modi become Prime Minister again. BJP Activists went to Durgaparameshwari Devi temple and offered special prayers for Modi to be Prime Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X