ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಸಿಲ ಹೊಡೆತಕ್ಕೆ ಪ್ರಚಾರದ ಸಮಯವನ್ನೇ ಬದಲಿಸಿಕೊಂಡ ಕರಾವಳಿಗರು

By ಗುರುರಾಜ ಕೆ
|
Google Oneindia Kannada News

ಮಂಗಳೂರು ಮೇ 2 : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 11 ದಿನಗಳು ಮಾತ್ರ ಬಾಕಿಯಿದೆ. ಅದರಲ್ಲೂ ರಾಜಕೀಯ ಪಕ್ಷಗಳಿಗೆ ತಮ್ಮ ಪರ ಪ್ರಚಾರ ನಡೆಸಲು ಬೆರಳೆಣಿಕೆಯ ದಿನಗಳು ಮಾತ್ರವಿದೆ. ಆದರೆ ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಪಕ್ಷಗಳಿಗೆ ಮನೆ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಲು ಬಿಸಿಲು ಅಡ್ಡಿಯಾಗಿದೆ.

ಸುಶಿಕ್ಷಿತ, ನಗರ ಪ್ರದೇಶದ ಜನರೇ ಮತಗಟ್ಟೆಗಳ ಬಳಿ ಸುಳಿಯದಿರಲು ಕಾರಣವೇನು?ಸುಶಿಕ್ಷಿತ, ನಗರ ಪ್ರದೇಶದ ಜನರೇ ಮತಗಟ್ಟೆಗಳ ಬಳಿ ಸುಳಿಯದಿರಲು ಕಾರಣವೇನು?

ಹೌದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅತೀ ಹೆಚ್ಚು ಉಷ್ಣಾಂಶ ದಾಖಲಾಗುತ್ತಿರುವ ಕಾರಣಕ್ಕಾಗಿ ಎಲ್ಲಾ ಪಕ್ಷದ ಕಾರ್ಯಕರ್ತರು ಬಿಸಿಲಿನ ಝಳ ತಪ್ಪಿಸುವ ನಿಟ್ಟಿನಲ್ಲಿ ತಮ್ಮ ಪ್ರಚಾರದ ಸಮಯವನ್ನೇ ಬದಲಾವಣೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ.

ಮತಬೇಟೆ ಆರಂಭ

ಮತಬೇಟೆ ಆರಂಭ

ರಾಜ್ಯದ ವಿಧಾನಸಭಾ ಚುನಾವಣೆ ಮೇ 12 ರಂದು ನಡೆಯಲಿದ್ದು, ಫಲಿತಾಂಶ ಮೇ 15 ಕ್ಕೆ ಪ್ರಕಟಗೊಳ್ಳಲಿದೆ. ಮೇ 15 ಪ್ರಕಟಗೊಳ್ಳುವ ಫಲಿತಾಂಶ ತನ್ನ ಪರ ಹಾಗೂ ತನ್ನ ಪಕ್ಷದ ಪರವಿರಲಿ ಎನ್ನುವ ಕಾರಣಕ್ಕಾಗಿ ಎಲ್ಲಾ ಪಕ್ಷಗಳೂ ತಮ್ಮ ಮತಬೇಟೆಯನ್ನು ಈಗಾಗಲೇ ಆರಂಭಿಸಿದೆ.

ಹೆಚ್ಚಿನ ಉಷ್ಣಾಂಶ ದಾಖಲು

ಹೆಚ್ಚಿನ ಉಷ್ಣಾಂಶ ದಾಖಲು

ಅಭ್ಯರ್ಥಿಗಳು ಬಹಿರಂಗ ಸಭೆಗಳಿಗಿಂತ ಮನೆ ಮನೆಗೆ ಭೇಟಿ ಕಾರ್ಯಕ್ರಮವನ್ನು ಹೆಚ್ಚಾಗಿ ನಡೆಸುವುದರಿಂದ ಕರಾವಳಿಯ ಬಿಸಿಲು ಅಭ್ಯರ್ಥಿಗಳ ಉತ್ಸಾಹಕ್ಕೆ ತಣ್ಣಿರೇರೆಚಿದೆ. ಜಿಲ್ಲೆಯಲ್ಲಿ ಪ್ರತಿದಿನ 35 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಉಷ್ಣಂಶ ದಾಖಲಾಗುತ್ತಿದೆ. ಈ ಕಾರಣಕ್ಕಾಗಿ ಬಿಸಿಲಿಗೆ ಮನೆ ಮನೆಗೆ ಭೇಟಿ ನೀಡುವುದು ಕಾರ್ಯಕರ್ತರಿಗೆ ಕಷ್ಟ ಸಾಧ್ಯವಾಗಿದೆ.

ಪ್ರಚಾರ ಸಮದಲ್ಲಿ ಬದಲಾವಣೆ

ಪ್ರಚಾರ ಸಮದಲ್ಲಿ ಬದಲಾವಣೆ

ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಪ್ರಚಾರ ಸಮಯದಲ್ಲಿ ಬದಲಾವಣೆಯನ್ನೂ ಮಾಡಿಕೊಳ್ಳಲಾಗಿದೆ. ಮುಂಜಾನೆಯಿಂದ ಆರಂಭಗೊಂಡ ಪ್ರಚಾರ ಮಧ್ಯಾಹ್ನದ ಒಳಗೆ ನಿಲ್ಲಿಸಲಾಗುತ್ತದೆ. ಬಳಿಕ ಮಧ್ಯಾಹ್ನ 3 ಗಂಟೆಯ ಬಳಿಕ ಮಧ್ಯರಾತ್ರಿವರೆಗೂ ಪ್ರಚಾರ ಕಾರ್ಯದಲ್ಲಿ ತೊಡಗುತ್ತಿದ್ದಾರೆ.

ಉರಿ ಬಿಸಿಲು ಲೆಕ್ಕಕ್ಕಿಲ್ಲ

ಉರಿ ಬಿಸಿಲು ಲೆಕ್ಕಕ್ಕಿಲ್ಲ

ಎಲ್ಲಾ ಪಕ್ಷಗಳ ಕಾರ್ಯಕರ್ತರಿಗೂ ಈ ಬಾರಿ ಬಿಸಿಲು ಭಾರೀ ಹೊಡೆತವನ್ನು ನೀಡಿದೆ. ಚುನಾವಣಾ ಕಾವಿನ ಜೊತೆಗೆ ಬಿಸಿಲಿನ ಬೇಗೆಯೂ ಹೆಚ್ಚಾಗುತ್ತಿದೆ. ಹೇಗಾದರೂ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ದೃಷ್ಟಿಯಲ್ಲಿ ಉರಿ ಬಿಸಿಲನ್ನು ಲೆಕ್ಕಿಸದೆಯೂ ಪ್ರಚಾರ ಕಾರ್ಯದಲ್ಲಿ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ.

English summary
State assembly election are only 11 days away. Particularly political parties have a few days to campaign. But this time in Dakshina Kannada districtheat disruption for parties to visit houses and vote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X