ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿ ಭಾಗದಲ್ಲಿ ಭಾರತ್ ಬಂದ್ ಗೆ ಪ್ರತಿಕ್ರಿಯೆ ಹೇಗಿದೆ?

|
Google Oneindia Kannada News

ಮಂಗಳೂರು, ಜನವರಿ 08: ಕಾರ್ಮಿಕ ಸಂಘಟನೆಗಳು ಇಂದು ಮತ್ತು ನಾಳೆ ಕರೆ ನೀಡಿರುವ ಅಖಿಲ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್ ಸ್ವಲ್ಪ ಮಟ್ಟಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನಜೀವನವನ್ನುಬಾಧಿಸಿದೆ.

ಸಿಐಟಿಯು, ಎಐಟಿಯುಸಿ, ಎಚ್‌ಎಂಎಸ್ ಮತ್ತು ಇಂಟಕ್ ಸಹಿತ ಇತರ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಸಂಯೋಜಿತಗೊಂಡಿರುವ ಸಾರಿಗೆ ನೌಕರರು ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಕರಾವಳಿಯ ಲೈಫ್ ಲೈನ್ ಎಂದೇ ಕರೆಯಲಾಗುವ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್ ಹಾಗೂ ಸಿಟಿಬಸ್ ಸಂಚಾರದಲ್ಲಿ ಸ್ವಲ್ಪ ಮಟ್ಟಿಗೆ ತೊಂದರೆ ಉಂಟಾಗಿದೆ.

ಭಾರತ್ ಬಂದ್ ವೇಳೆ ಕಂಡ ಚಿತ್ರಣಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಖಾಸಗಿ ಬಸ್ ಮಾಲೀಕರ ಸಂಘ ಬೆಂಬಲ ನೀಡಿಲ್ಲ . ಆದರೆ ಕೆಲ ಬಸ್ ಚಾಲಕರು ಹಾಗೂ ನಿರ್ವಹಕರು ಬಂದ್ ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಕೆಲ ಬಸ್ ಗಳು ಇಂದು ರಸ್ತೆಗಿಳಿದಿಲ್ಲ.

ಭಾರತ್ ಬಂದ್ LIVE: ರಾಜ್ಯದ ಹಲವೆಡೆ ತಟ್ಟದ ಬಂದ್ ಬಿಸಿಭಾರತ್ ಬಂದ್ LIVE: ರಾಜ್ಯದ ಹಲವೆಡೆ ತಟ್ಟದ ಬಂದ್ ಬಿಸಿ

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಖಾಸಗಿ ಬಸ್ ಗಳು ಮುಂಜಾನೆಯಿಂದಲೇ ರಸ್ತೆಗಿಳಿದು ಸಂಚಾರ ಆರಂಭಿಸಿವೆ. ಆಟೋ ರಿಕ್ಷಾಗಳು ಕೂಡ ಸಂಚಾರ ಆರಂಭಿಸಿವೆ ಮುಂದೆ ಓದಿ...

ಭಾಗಶಃ ವ್ಯತ್ಯಯ

ಭಾಗಶಃ ವ್ಯತ್ಯಯ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಂಗಡಿ, ಮಳಿಗೆ ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಸೇವೆ ಭಾಗಶಃ ವ್ಯತ್ಯಯಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲಾ ರಿಕ್ಷಾ ಚಾಲಕರ ಸಂಘ ಬಂದ್‌ಗೆ ಬೆಂಬಲ ಸೂಚಿಸಿದೆಯಾದರೂ, ಕೆಲವು ಸಂಘಟನೆಗಳು ಕೈಜೋಡಿಸಿಲ್ಲ. ಈ ಹಿನ್ನೆಲೆಯಲ್ಲಿ ನಗರದಲ್ಲಿ ರಿಕ್ಷಾಗಳು ಓಡಾಡುತ್ತಿವೆ. ಮಾಲ್ ಗಳು, ಚಿತ್ರಮಂದಿರಗಳು, ಪೆಟ್ರೋಲ್ ಬಂಕ್ ಗಳು, ಮೆಡಿಕಲ್ ಶಾಪ್ ಸಹಿತ ಅಗತ್ಯ ವಸ್ತು ಸೇವೆ ಲಭ್ಯವಿದೆ. ಆದರೆ ಮಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರ ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೆಲಸ ಸ್ಥಗಿತಗೊಳಿಸಿದ್ದಾರೆ.

ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಶಾಲೆ, ಕಾಲೇಜುಗಳಿಗೆ ರಜೆ

ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು ವಿವಿ ಪದವಿ ಪ್ರಾಯೋಗಿಕ ಪರೀಕ್ಷೆಗಳು ಸೋಮವಾರದಿಂದ ಆರಂಭವಾಗಿರುವುದನ್ನು ಬಂದ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಶಾಲಾ ಕಾಲೇಜುಗಳಿಗೂ ಇಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿಯೂ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ನೀಡಿದ್ದು, ಮುಂಜಾಗ್ರತಾ ಕ್ರಮದ ಅಂಗವಾಗಿ ಸರ್ಕಾರಿ, ಖಾಸಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಭಾರತ್ ಬಂದ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಅಧಿಕಾರಿ ಸಿಬ್ಬಂದಿಯನ್ನು ಹಾಗೂ ಕೆ ಎಸ್ ಆರ್ ಪಿ ,ಡಿ ಎ ಆರ್ ತುಕಡಿಗಳನ್ನು ನಿಯೋಜಿಸಿಲಾಗಿದ್ದು ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ .

ಕಾರವಾರದಲ್ಲಿ ಭಾರತ್ ಬಂದ್ ಗೆ ಬೆಂಬಲ ಕೊಟ್ಟ ಕೆಎಸ್ ಆರ್ ಟಿಸಿ ಸಂಘಟನೆಕಾರವಾರದಲ್ಲಿ ಭಾರತ್ ಬಂದ್ ಗೆ ಬೆಂಬಲ ಕೊಟ್ಟ ಕೆಎಸ್ ಆರ್ ಟಿಸಿ ಸಂಘಟನೆ

ಎಚ್ಚರಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು

ಎಚ್ಚರಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು

ಜಿಲ್ಲೆಯ ಇತರ ತಾಲೂಕಿನಲ್ಲಿಯೂ ಇಂದಿನ ಬಂದ್ ಗೆ ಯಾವುದೇ ರೀತಿಯಲ್ಲಿ ಬೆಂಬಲ ದೊರೆಯುವ ಸೂಚನೆಗಳು ಕಾಣುತ್ತಿಲ್ಲ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಮೂಡಬಿದ್ರೆಯ ಮುಖ್ಯ ಪೇಟೆಯಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿವೆ. ಅಲ್ಲದೆ ಕೆ.ಎಸ್. ಆರ್. ಟಿ ಬಸ್ ಗಳ ಒಡಾಟವೂ ಎಂದಿನಂತೆ ಇದೆ.ಇನ್ನು ಖಾಸಗಿ ಬಸ್, ಆಟೋ ರಿಕ್ಷಾ ಸೇವೆಯಲ್ಲೂ ಯಾವುದೇ ಬದಲಾವಣೆಗಳಿಲ್ಲ.

ಸ್ವಯಂ ಪ್ರೇರಿತ ಬಂದ್ ಆಚರಿಸುವುದನ್ನು ಹೊರತುಪಡಿಸಿ ಯಾವುದೇ ಸಂಘಟನೆಗಳ ಮುಖಂಡರಾಗಲಿ ಸಂಘಟನೆಗಳ ಸದಸ್ಯರಾಗಲಿ ಒತ್ತಾಯಪೂರ್ವಕವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸುವುದಾಗಲಿ, ರಸ್ತೆತಡೆ ಇತ್ಯಾದಿಗಳನ್ನು ಮಾಡುವುದಾಗಲಿ, ಸಾರ್ವಜನಿಕರಿಗೆ ತೊಂದರೆ ಕೊಡುವುದಾಗಲಿ ಕಂಡುಬಂದಲ್ಲಿ ಹಾಗೂ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಎಚ್ಚರಿಸಿದ್ದಾರೆ.

ಪೆಟ್ರೋಲಿಂಗ್ ನಡೆಸಲಾಗುತ್ತಿದೆ

ಪೆಟ್ರೋಲಿಂಗ್ ನಡೆಸಲಾಗುತ್ತಿದೆ

ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ನಗರಾದ್ಯಂತ ಬೆಳಗ್ಗೆಯೇ ಪೆಟ್ರೋಲಿಂಗ್ ನಡೆಸಲಾಗುತ್ತಿದೆ. 4 ಕೆಎಸ್ ಆರ್ ಪಿ ತುಕಡಿ, 12ಸಿಆರ್ ಪಿ ತುಕಡಿ ಹಾಗೂ ನಗರದ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಸಿಬ್ಬಂದಿ ಬಂದೋಬಸ್ತ್ ನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದಾರೆ.

ಬಂದ್ ಕರೆಗೆ ಜಿಲ್ಲಾ ರಿಕ್ಷಾ ಚಾಲಕರ ಸಂಘ ಸಿಪಿಐ(ಎಂ), ಭಾತರ ಕಮ್ಯುಸಿಸ್ಟ್ ಪಕ್ಷ (ಮಾರ್ಕ್ಸ್ವ್ ವಾದಿ) ,ಸಿಪಿ ಐ ಬೆಂಬಲ ಸೂಚಿಸಿದೆ. ಮೋಟರ್ ಟ್ರಾನ್ಸ್ ಪೋರ್ಟ್ ಆ್ಯಂಡ್ ಎಂಜಿನಿಯರಿಂಗ್ ವರ್ಕರ್ಸ್ ಯೂನಿಯನ್ ಬೆಂಬಲಿತ ಕಾರ್ಮಿಕ ಸಂಘಟನೆ. ದಕ್ಷಿಣ ಕನ್ನಡ ಜಿಲ್ಲಾ ಡಿ ವೈ ಎಫ್ ಐ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘ ( ಹಸಿರು ಸೇನೆ), ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ( ಜೆ ಸಿ ಟಿ ಯು) , ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪಿಂಚಣಿದಾರರ ಸಂಘ, ಅಖಿಲ ಭಾರತ ಬೀಡಿ ಫೆಡರೇಶನ್ (ಸಿ ಐ ಟಿ ಯು ) ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ನಾಳಿನ ಬಂದ್ ಗೂ ಬೆಂಬಲ ಸೂಚಿಸಿವೆ.

English summary
The response to Bharath Bandh in Dakshina Kannada District has been poor . Private as well as government buses are seen moving on roads. Even Auto reckshaw's are seen plying.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X