ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ, ಕೊಚ್ಚಿ ಹೋದ ಸೇತುವೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 16; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾ‌ನೆ. ಸತತವಾಗಿ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅಪಾರ ಹಾನಿ ಸಂಭವಿಸಿದೆ.

ನೈಋತ್ಯ ಮುಂಗಾರಿನ ಅಬ್ಬರಕ್ಕೆ ನದಿ, ತೊರೆಗಳು ತುಂಬಿ ಹರಿಯುತ್ತಿದೆ. ಭಾರೀ ನೀರಿನ ಹರಿವಿನಿಂದಾಗಿ ಜಿಲ್ಲೆಯಲ್ಲಿ ಮತ್ತೊಂದು ಸೇತುವೆ ಕೊಚ್ಚಿ ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಲೂರಿನ ಕುಕ್ಕಾಜೆ ಎಂಬಲ್ಲಿ ಸೇತುವೆಗೆ ಹಾನಿಯಾಗಿದೆ.

ಪ್ರಧಾನಿ ಸೂಚಿಸಿದರೂ ಈಡೇರದ ಬೇಡಿಕೆ; ಸ್ವಂತ ಖರ್ಚಿನಲ್ಲಿ ಸೇತುವೆ ನಿರ್ಮಾಣಪ್ರಧಾನಿ ಸೂಚಿಸಿದರೂ ಈಡೇರದ ಬೇಡಿಕೆ; ಸ್ವಂತ ಖರ್ಚಿನಲ್ಲಿ ಸೇತುವೆ ನಿರ್ಮಾಣ

ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿದೆ. ಮಳೆಗೆ ಸೇತುವೆ ಕೊಚ್ಚಿ ಹೋಗಿದ್ದು, ಇದೀಗ ಹೊರಜಗತ್ತಿನ ಸಂಪರ್ಕ ಕಳೆದುಕೊಳ್ಳುವ ಭೀತಿ ಗ್ರಾಮಸ್ಥರಿಗೆ ಎದುರಾಗಿದೆ. ಹೊಸ ಸೇತುವೆ ಕಾಮಗಾರಿ ಸಹ ಅರ್ಧಕ್ಕೆ ನಿಂತಿದೆ.

 ಮಲೆನಾಡಿನಲ್ಲಿ ಮುಂದುವರೆದ ಮಳೆ ಅಬ್ಬರ: ಮೈದುಂಬಿ ಹರಿದ ಭದ್ರಾ ನದಿ ಮಲೆನಾಡಿನಲ್ಲಿ ಮುಂದುವರೆದ ಮಳೆ ಅಬ್ಬರ: ಮೈದುಂಬಿ ಹರಿದ ಭದ್ರಾ ನದಿ

Portion Of Bridge Washed Away Due To Heavy Rain In Belthangady

ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಹರಿದು ಬರುವ ಹಳ್ಳಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆ ಇದಾಗಿತ್ತು. ಭಾರೀ ನೀರಿನ ಹರಿವಿಗೆ ಸೇತುವೆ ಕೊಚ್ಚಿ ಹೋಗಿದೆ. ಹೊಸ ಸೇತುವೆ ನಿರ್ಮಾಣ ಕಾಮಗಾರಿ ಆಗುತ್ತಿದ್ದರೂ, ಲಾಕ್‌ಡೌನ್ ಕಾರಣದಿಂದ ಅರ್ಧಕ್ಕೆ ಕಾಮಗಾರಿ ನಿಂತಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ; ದಿನವಿಡೀ ಧಾರಾಕಾರ ಮಳೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ; ದಿನವಿಡೀ ಧಾರಾಕಾರ ಮಳೆ

ಜಿಲ್ಲೆಯ ವಿವಿಧ ಭಾಗದಲ್ಲೂ ಭಾರೀ ಮಳೆಗೆ ಅಪಾರ ಹಾನಿಯಾಗಿದೆ. ಗಾಳಿಗೆ ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಗಾತ್ರದ ಮರಗಳು ರಸ್ತೆಗೆ ಉರುಳಿದೆ. ಈ ಹಿನ್ನಲೆಯಲ್ಲಿ ಕೆಲ ಕಾಲ ರಸ್ತೆ ಸಂಚಾರಕ್ಕೆ ತಡೆಯುಂಟಾಗಿತ್ತು.

Portion Of Bridge Washed Away Due To Heavy Rain In Belthangady

ಜೆಸಿಬಿಯಿಂದ ಮರ ತೆರವುಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಜಿಲ್ಲೆಯ ಜೀವನದಿ ಕುಮಾರಾಧಾರಾ, ನೇತ್ರಾವತಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಜನ ನದಿ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.

ಮಂಗಳವಾರ ಮಂಗಳೂರಿನ ಫಲ್ಗುಣಿ ನದಿಗೆ ಅಡ್ಡಲಾಗಿರುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆಯಲ್ಲಿರುವ ಸೇತುವೆ ಇದಾಗಿದ್ದು, ವಾಹನ ಸಂಚಾರ ಬಂದ್ ಮಾಡಲಾಗಿದೆ.

English summary
A portion the bridge in Dakshina Kannada district Belthangady taluk was damaged due to heavy rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X