ಅತ್ಯಾಚಾರ ಸಂತ್ರಸ್ತೆ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಆರೋಪಿಗಳ ಬಂಧನ
ಮಂಗಳೂರು ಜನವರಿ 18: ಅತ್ಯಾಚಾರ ಪ್ರಕರಣ ಸಂತ್ರಸ್ಥ ಬಾಲಕಿಯ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಕಾಶಭವನ ಶರಣ್ ಎಂಬಾತನು ಅತ್ಯಾಚಾರ ವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಅಪ್ರಾಪ್ತ ಬಾಲಕಿಯ ಫೋಟೋ ಹಾಗೂ ಆಕೆಯ ವಿರುದ್ದ ವಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವು ಸಂದೇಶವನ್ನು ಕಳುಹಿಸಲಾಗಿತ್ತು. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲಿಸರು ಸೋಮೇಶ್ವರ ನಿವಾಸಿ ನಿವೇಶ್ ( 28) ಹಾಗು ದುರ್ಗೇಶ್, ( 25 ) ಎಂಬವರನ್ನು ಬಂಧಿಸಿದ್ದಾರೆ.












Click it and Unblock the Notifications