Breaking: ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಇಂದೇ ನ್ಯಾಯಾಲಯಕ್ಕೆ ಹಾಜರು

ಮಂಗಳೂರು, ಜುಲೈ 28: ಸುಳ್ಯದ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳು ಬಂಧಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

Recommended Video

      ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮಾಸ್ಟರ್ ಪ್ಲಾನ್!! | OneIndia Kannada

      ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಣೂರು ಮೂಲದ ಜಾಕೀರ್ ಮತ್ತು ಬೆಳ್ಳಾರೆ ಮೂಲದ ಶಫೀಕ್‌ ಎಂಬುವವರನ್ನು ಕಾಸರಗೂಡಿನಲ್ಲಿ ಬಂಧಿಸಲಾಗಿದೆ. ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿದ್ದು, ಸುಳ್ಯದಲ್ಲಿ ಪಕ್ಷವನ್ನು ಸಂಘಟನೆ ಮಾಡುತ್ತಿದ್ದ ಎನ್ನಲಾಗಿದೆ. ಹತ್ಯೆ ಆರೋಪಿಗಳು ಇನ್ನೂ ಸಿಕ್ಕಿಲ್ಲ. ಆದರೆ ಹತ್ಯೆಗೆ ಸ್ಕೆಚ್‌ ಹಾಕಿದವರನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ಗುರುವಾರವೇ ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ, ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ, ಹಾಗಾಗಿ ಇಷ್ಟು ಮಾಹಿತಿಯನ್ನು ಮಾತ್ರ ನೀಡಬಲ್ಲೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

      Praveen Murder case:Two Main Accused Arrested in Kasaragod


      ಬಂಧನವಾಗಿರುವ ಇಬ್ಬರು ಆರೋಪಿಗಳಿಗೂ ಪಿಎಫ್ಐ ಸಂಘಟನೆಯ ಲಿಂಕ್ ಇರುವ ಸಂಶಯ ವ್ಯಕ್ತವಾಗಿದೆ. ಮುಂದಿನ ತನಿಖೆಯಿಂದ ಎಲ್ಲಾ ಮಾಹಿತಿಗಳು ಬೆಳಕಿಗೆ ಬರಲಿದೆ. ಯಾವ ಯಾವ ಸಂಘಟನೆಗಳು ಈ ಘಟನೆ ಹಿಂದೆವೆ ಎನ್ನುವುದರ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
      Praveen Murder case:Two Main Accused Arrested in Kasaragod

      ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ಸ್ವತಃ ತನಿಖೆಗೆ ಇಳಿದಿದ್ದಾರೆ. ನೆಟ್ಟಾರುವಿನಲ್ಲಿರುವ ಪ್ರವೀಣ್‌ ಅವರ ಮನೆಗೆ ಹಾಗೂ ಬೆಳ್ಳಾರೆ ಠಾಣೆಗೂ ಭೇಟಿಯನ್ನು ಕೊಟ್ಟು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಇಬ್ಬರೂ ಕೂಡ ಬೆಳ್ಳಾರೆಯವರೇ ಆಗಿದ್ದಾರೆ ಎಂದು ಅಲೋಕ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+