Breaking: ಬಿಜೆಪಿ ಮುಖಂಡರ ಮೇಲೆ ಕಾರ್ಯಕರ್ತರಿಂದ ಹಲ್ಲೆ
ಮಂಗಳೂರು, ಜುಲೈ 27: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಹತ್ಯೆಗೊಳಗಾಗಿರುವ ಬಿಜೆಪಿ ಯುವ ಮೋರ್ಚಾದ ಮುಖಂಡ 31 ವರ್ಷ ಪ್ರವೀಣ್ ಕುಮಾರ್ ನೆಟ್ಟಾರ್‌ಗೆ ಅಂತಿಮ ನಮನ ಸಲ್ಲಿಸಲು ಹೋದಾಗ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ.
#Karnataka #BJP Yuva Morcha workers attack party president Nalin Kateel and heckle district incharge minister Sunil Kumar in #Puttur #DakshinKannada when they went to pay his last respects to murdered yuva morcha president #Praveen Nettar. pic.twitter.com/EqdnIPFbi6
— Imran Khan (@KeypadGuerilla) July 27, 2022
ಪ್ರವೀಣ್ ನೆಟ್ಟಾರ್ ಅವರಿಗೆ ಅಂತಿಮ ನಮನ ಸಲ್ಲಿಸಲು ಹೋದಾಗ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಳಿನ್ ಕಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಮೇಲೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಬಿಜೆಪಿ ಅಧ್ಯಕ್ಷರ ಕಾರಿಗೆ ಘೇರಾವ್ ಹಾಕಿದ ಮತ್ತು ಇತರ ನಾಯಕರ ಮೇಲೆ ಹಲ್ಲೆ ಮಾಡಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ತಡೆಯಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡ 31 ವರ್ಷ ಪ್ರವೀಣ್ ಕುಮಾರ್ ನೆಟ್ಟಾರುನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಪ್ರವೀಣ್ ಹತ್ಯೆಗೆ ರಾಜ್ಯ ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಪ್ರಕರಣದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯನ್ನು ಕಾಪಾಡಬೇಕು. ಅಮಾಯಕ ಪ್ರವೀಣ್‌ರನ್ನು ಹತ್ಯೆಗೈದ ಆರೋಪಿಗಳನ್ನು ಶೀಘ್ರವಾಗಿ ಹೆಡೆಮುರಿ ಕಟ್ಟುತ್ತೇವೆ ಎಂದು ಹೇಳಿದ್ದಾರೆ.
ಸುಳ್ಯದ ಬೆಳ್ಳಾರೆಯಲ್ಲಿ ನಿನ್ನೆ ರಾತ್ರಿ ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ, ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಎಂಬ ಯುವಕನನ್ನು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕಳೆದ 4 ದಿನಗಳ ಹಿಂದೆ ಅನ್ಯ ಕೋಮಿನ ಯುವಕನೋರ್ವನ ಕೊಲೆ ನಡೆದಿತ್ತು.












Click it and Unblock the Notifications