ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮಂಗಳೂರು: ಎಸ್‌ಡಿಪಿಐ, ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆ.22: ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಮಂಗಳೂರಿನ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ಮಾಡಿ ತನಿಖೆ ಆರಂಭಿಸಿದ್ದಾರೆ.

ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿಗಳಿಗೆ ಮುಂಜಾನೆ 3.30ರ ಸುಮಾರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ. ಪಿಎಫ್ಐ, ಎಸ್ ಡಿಪಿಐ ಮುಖಂಡರ ಮನೆ ಮೇಲೆ ದಾಳಿ ಮಾಡಲಾಗಿದೆ. ಒಟ್ಟಾರೆ ಎಂಟು ಕಡೆಗಳಲ್ಲಿ ಎನ್‌ಐಎ ದಾಳಿ ನೆಡೆದಿದೆ ಎಂದು ತಿಳಿದು ಬಂದಿದೆ.

Mangaluru praveen nettaru case: NIA raids on SDPI, PFI offices

ಈ ಮಧ್ಯೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳು ಮತ್ತು ಮುಖಂಡ ಮನೆ ಮೇಲೆ ಎನ್‌ಐಎ ದಾಳಿ ಖಂಡಿಸಿ ಆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಪೊಲೀಸರು ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿದ್ದು, ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೆ, ಅರೆಮೀಸಲು ಪಡೆಯಿಂದಲೂ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.

ಗೋ ಬ್ಯಾಕ್ ಎನ್‌ಐಎ:
ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿ ಮಾಡಿದ ವಿಷಯ ತಿಳಿಯುತ್ತಿದ್ದಂತೆ ನೂರಾರು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ಆರಂಭಿಸಿದರು. ಗೋಬ್ಯಾಕ್ ಎನ್‌ಐಎ, ಗೋ ಬ್ಯಾಕ್ ಎನ್‌ಐಎ ಎಂಬ ಘೋಷಣೆಗಳನ್ನು ಕೂಗಿದರು. ಎನ್‌ಐಎ ದಾಳಿಯನ್ನು ಖಂಡಿಸಿದರು. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

English summary
National Investigation Agency (NIA) officials raided the office of PFI and SDPI in Mangalore on Thursday morning in connection with the recent murder of Praveen Nettaru and started investigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X