ಸಿಎಂ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ

ಮಂಗಳೂರು, ಅಕ್ಟೋಬರ್ 14: ಕೆಲವು ತಿಂಗಳ ಹಿಂದೆ ಕೋಮು ದಳ್ಳುರಿಯಲ್ಲಿ ಬಲಿಯಾದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿಗೆ ಬಸವರಾಜ ಬೊಮ್ಮಾಯಿ ನುಡಿದಂತೆ ಸರಕಾರಿ ಕೆಲಸ ಕೊಡಿಸಿದ್ದು, ಪ್ರವೀಣ್ ಪತ್ನಿ ನೂತನಕುಮಾರಿ ಗುರುವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಗುರುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೂತನ ಕೂಮಾರಿ ನೇಮಕಾತಿ ಆದೇಶಪತ್ರವನ್ನು ಸ್ವೀಕರಿಸಿದ್ದರು. ನೂತನ ಕುಮಾರಿಗೆ ಅನುಕಂಪದ ನೌಕರಿ ಬಗ್ಗೆ ಸಿಎಂ ಆದೇಶ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಪಡೆದಿದ್ದಾರೆ.

ನೂತನ ಕುಮಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ನೀಡಲಾಗಿದೆ.

Praveen Nettarus wife joins duty at Mangaluru DC office on Thursday

ಸಿಎಂ ಕಚೇರಿಯ ಆದೇಶ ಪ್ರಕಾರ ನೂತನ ಕುಮಾರಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಸಿಎಂ ಪರಿಹಾರ ನಿಧಿ ವಿಭಾಗದಲ್ಲಿ ಕೆಲಸಕ್ಕೆ ಸೇರ್ಪಡೆಗೊಳಿಸಲಾಗಿದೆ. ತುರ್ತು ಕೆಲಸದ ಹಿನ್ನೆಲೆಯಲ್ಲಿ ನೂತನ ಕುಮಾರಿ ರಜೆಯಲ್ಲಿದ್ದು, ಅಕ್ಟೋಬರ್ 17ರಿಂದ ಕಾಯಂ ಆಗಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಈ ಹಿಂದೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವೀಣ್ ನೆಟ್ಟಾರು ಪತ್ನಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಕೆಲಸ ಕೊಡಿಸುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ನಾಗರಿಕ ಸೇವಾ(ಸಾಮಾನ್ಯ ನೇಮಕಾತಿ) ನಿಯಮಾವಳಿ, 1977ರ ನಿಯಮ 15,1(ಬಿ)(1)ರ ಪ್ರಕಾರ ಸೆ.29ರಂದು ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೇಮಕಾತಿ ಆದೇಶವನ್ನು ಹೊರಡಿಸಿದ್ದರು.

ಉದ್ಯೋಗ ಕೊಟ್ಟ ಹಿನ್ನೆಲೆಯಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಅಕ್ಟೋಬರ್ 7ರಂದು, ಸಿಎಂ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತರಿದ್ದರು. ಅಲ್ಲದೆ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+