• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೃಷ್ಣಮಠಕ್ಕೆ ರಾಷ್ಟ್ರಪತಿ ಭೇಟಿ: ಸಂಜೆ ತನಕ ಭಕ್ತರಿಗೆ ನಿರ್ಬಂಧ

|

ಮಂಗಳೂರು, ಡಿಸೆಂಬರ್ 27 : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಇಂದು ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದೆಹಲಿಯಿಂದ ವಿಶೇಷ ವಿಮಾನ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ಅವರನ್ನು ರಾಜ್ಯಪಾಲ ವಾಜುಬಾಯಿ ವಾಲಾ ಅವರು ಸ್ವಾಗತಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮೇಯರ್ ಭಾಸ್ಕರ ಮೊಯ್ಲಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಪೊಲೀಸ್ ಆಯುಕ್ತರು ಟಿ.ಆರ್. ಸುರೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿಕಾಂತೇ ಗೌಡ ಮತ್ತಿತರರು ಉಪಸ್ಥಿತರಿದ್ದರು.

87ರ ಹರೆಯದ ಪೇಜಾವರ ಶ್ರೀಗಳಿಗೆ ಕೃಷ್ಣಮಠದಲ್ಲಿ ಗುರುವಂದನೆ

ನಂತರ ರಾಷ್ಟ್ರಪತಿಗಳು ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು. ಪೇಜಾವರ ಶ್ರೀಗಳ ಸನ್ಯಾಸ ಸ್ವೀಕಾರಕ್ಕೆ ಎಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಪೇಜಾವರ ಶ್ರೀ ಅವರನ್ನು ಭೇಟಿಯಾಗಲು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉಡುಪಿಗೆ ತೆರಳಲಿದ್ದಾರೆ.

ಉಡುಪಿಗೆ ಡಿ.27 ರಂದು ರಾಷ್ಟ್ರಪತಿ ಭೇಟಿ, ಕೃಷ್ಣ ಮಠಕ್ಕೆ ಬಿಗಿ ಭದ್ರತೆ

ಕೃಷ್ಣಮಠಕ್ಕೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸಂಜೆ ತನಕ ಭಕ್ತರಿಗೆ ಶ್ರೀಕೃಷ್ಣದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.

English summary
On the way to Udupi President Ram Nath Kovind visited Mangaluru airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X