ಪುತ್ತೂರು ಬಳಿ ಖಾಸಗಿ ಬಸ್- ಕಾರ್ ಮುಖಾಮುಖಿ ಡಿಕ್ಕಿ, ಚಾಲಕ ಸಾವು

ಮಂಗಳೂರು, ಆಗಸ್ಟ್ 12: ಖಾಸಗಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ, ಕಾರು ಚಾಲಕ ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಹೊರವಲಯದ ಪೋಳ್ಯ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಈಶ್ವರಮಂಗಲದ ಮುಂಡೋಳೆಯ ಅಬ್ದುಲ್ ಹಕೀಮ್ (23) ಎಂದು ಗುರುತಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪುತ್ತೂರಿನಿಂದ ಮಂಗಳೂರು ಕಡೇ ತೆರಳುತಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರಿಗೆ ತೆರಳುತಿದ್ದ ಖಾಸಗಿ ಬಸ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಮೃತರು ಕಾರಿನಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ತಮ್ಮ ಬಂಧು, ಮಿತ್ರರ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Private Bus Met Accident With Car; Driver Died

ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದ್ದು, ಅಪಘಾತ ಸಂಭವಿಸಿದ ಬಳಿಕ ಸ್ಥಳದಲ್ಲಿ ಸೇರಿದ ಉದ್ರಿಕ್ತರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+