ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂತ್ರಸ್ತರಿಗೆ ಮೂರು ದಿನಗಳಲ್ಲಿ ಪರಿಹಾರ; ಯು.ಟಿ ಖಾದರ್ ಭರವಸೆ

|
Google Oneindia Kannada News

ಮಂಗಳೂರು, ಜೂನ್ 15: ಮಂಗಳೂರು ಹೊರವಲಯದ ಪ್ರದೇಶಗಳಲ್ಲಿ ಕಡಲ ಕೊರೆತ ಮುಂದುವರೆದಿದೆ. ಈ ಮಧ್ಯೆ ಉಳ್ಳಾಲ, ಸೋಮೇಶ್ವರ, ಕೈಕೋ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪರಿಹಾರ ಕಾರ್ಯ ಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

 ತಾವೇ ಎಳನೀರು ಕೊಚ್ಚಿ ಕುಡಿದ ಸಚಿವ ಯು.ಟಿ. ಖಾದರ್ ತಾವೇ ಎಳನೀರು ಕೊಚ್ಚಿ ಕುಡಿದ ಸಚಿವ ಯು.ಟಿ. ಖಾದರ್

ಈ ಸಂದರ್ಭದಲ್ಲಿ ಮಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿಯನ್ನು ಅವೈಜ್ಞಾನಿಕ ಎಂದು ಹೇಳಲು ಸಾಧ್ಯವಿಲ್ಲ. ಕಾಮಗಾರಿ ಪರಿಶೀಲನೆಗೆ ಎಡಿಬಿಯ ಪರಿಣತರ ತಂಡವಿದ್ದು, ಉಚ್ಚಿಲದಲ್ಲಿ ಕಾಮಗಾರಿ ಕೈಗೊಳ್ಳುವ ಮೊದಲು ಪುಣೆ, ಚೆನ್ನೈ ಎಡಿಬಿ ತಜ್ಞರ ಸಮಿತಿ ಮಾರ್ಗದರ್ಶನದಲ್ಲಿ ಕಾಮಗಾರಿ ಆರಂಭಿಸಿದ್ದಾಗಿದೆ. ಕಾಮಗಾರಿ ಪೂರ್ಣಗೊಂಡರೆ ಕಡಲ್ಕೊರೆತ ಸಮಸ್ಯೆ ಬಗೆಹರಿಯಲಿದೆ ಎಂದು ಹೇಳಿದ್ದಾರೆ.

Proper facilities for victims of sea erosion said UT Khader

ಉಳ್ಳಾಲ, ಸೋಮೇಶ್ವರ ಮತ್ತು ಉಚ್ಚಿಲದಲ್ಲಿ ಕಳೆದ ಮೂರು ದಿನಗಳಿಂದ ಎದುರಾಗಿರುವ ಕಡಲ್ಕೊರೆತದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಬಂದರು, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿದ್ದು, ಸಂತ್ರಸ್ತರಿಗೆ ಮೂರು ದಿನಗಳೊಳಗೆ ಪರಿಹಾರ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

English summary
Dakashina Kannada district minister UT Khader assured of proper facilities to victims of sea erosion in three days
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X