ಮಂಗಳೂರಲ್ಲಿ ಅಪಾರ್ಟ್ಮೆಂಟ್ ಮೇಲೆ ದಾಳಿ, ಬಯಲಾದ ವೇಶ್ಯಾವಾಟಿಕೆ
ಮಂಗಳೂರು, ಮೇ 31: ವೇಶ್ಯಾವಾಟಿಕೆ ನಿಯಂತ್ರಣಕ್ಕೆ ಏನೆಲ್ಲಾ ಕ್ರಮ ಕೈಗೊಂಡಿದ್ದರೂ, ಈ ದಂಧೆ ಮಾತ್ರ ಸಂಪೂರ್ಣವಾಗಿ ನಿಂತಿಲ್ಲ. ಬೇರೆ, ಬೇರೆ ರೂಪಗಳಲ್ಲಿ, ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದ್ದು, ಇಂತಹ ಅಡ್ಡೆಯೊಂದರ ಮೇಲೆ ಮಂಗಳೂರು ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ನಗರದ ಕೊಡಿಯಾಲ್ ಬೈಲ್ ಅಪಾರ್ಟ್ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು, ದಿಢೀರ್ ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ 3 ಮಂದಿಯನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಬಂಧಿತರನ್ನು ರಮೇಶ್, ಶ್ರೀನಿವಾಸ್ ಮತ್ತು ಆಗ್ನೆಸ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.












Click it and Unblock the Notifications