ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲ ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು

|
Google Oneindia Kannada News

ಮಂಗಳೂರು, ನವೆಂಬರ್. 20: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವೊಂದನ್ನು ಭೇದಿಸಿದ ಮಂಗಳೂರು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮಂಗಳೂರು ನಗರದ ಮಠದಕಣಿ 1 ನೇ ಕ್ರಾಸ್ ರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಗ್ರಾಹಕರಿಗೆ ಒದಗಿಸುತ್ತಿದ್ದ ದಲ್ಲಾಳಿ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ಎಗ್ಗುಸಿಗ್ಗಿಲ್ಲದೆ ರಹಸ್ಯಮಯವಾಗಿ ನಡೆಯುತ್ತಿದೆ ವೇಶ್ಯಾವಾಟಿಕೆಕರ್ನಾಟಕದಲ್ಲಿ ಎಗ್ಗುಸಿಗ್ಗಿಲ್ಲದೆ ರಹಸ್ಯಮಯವಾಗಿ ನಡೆಯುತ್ತಿದೆ ವೇಶ್ಯಾವಾಟಿಕೆ

ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ (ನ19)ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವೇಶ್ಯಾವಾಟಿಕೆಗೆ ಯುವತಿಯರನ್ನು ಒದಗಿಸುತ್ತಿದ್ದ ದಲ್ಲಾಳಿ ಮಂಗಳೂರು ಕುಂಟಿಕಾನ ನಿವಾಸಿ ಮೇಘರಾಜ್ ಎಂಬುವವರನ್ನು ಬಂಧಿಸಿದ್ದಾರೆ.

Prostitution racket busted in Mangaluru

ಮೈಸೂರಿನಲ್ಲಿ ಯೋಗ ಕೋರ್ಸ್ ಸೆಂಟರ್‌ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆಮೈಸೂರಿನಲ್ಲಿ ಯೋಗ ಕೋರ್ಸ್ ಸೆಂಟರ್‌ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆ

ಬಂಧಿತನಿಂದ 2 ಮೊಬೈಲ್ ಫೋನ್, ಲ್ಯಾಪ್ ಟಾಪ್, ನಗದು ಹಣ 6 ಸಾವಿರ ರೂಪಾಯಿ, ಬೈಕ್, ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತಿನ ಒಟ್ಟು ಮೌಲ್ಯ 1.71 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ದಾಳಿ ಸಂದರ್ಭದಲ್ಲಿ ಮನೆಯಲ್ಲಿದ್ದ ಯುವತಿಯರನ್ನು ರಕ್ಷಿಸಲಾಗಿದೆ.

English summary
Mangaluru CCB police busted prostitution racket in rented house near Mannagudda area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X