ಸೋಮೇಶ್ವರ; ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಇಬ್ಬರು ಮಹಿಳೆಯರ ಬಂಧನ
ಮಂಗಳೂರು, ಆಗಸ್ಟ್ 27: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಮೇಲೆ ಇಬ್ಬರು ಮಹಿಳೆಯರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಸೋಮೇಶ್ವರ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜೆಪ್ಪಿನಮೊಗರು ನಿವಾಸಿ ಸರಸ್ವತಿ (37) ಮತ್ತು ಕಾಸರಗೋಡು ಮಂಜೇಶ್ವರ ನಿವಾಸಿ ಆರುಂಧತಿ (38) ಎಂದು ಗುರುತಿಸಲಾಗಿದೆ. ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ.
ಸೋಮೇಶ್ವರದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರನ್ನು ಬಂಧಿಸಿ ಬಂಧಿತರಿಂದ 20 ಸಾವಿರ ರೂಪಾಯಿ ನಗದು, ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿ ಸಂದರ್ಭ ವೇಶ್ಯಾವಾಟಿಕೆಗೆ ದೂಡಲಾಗಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಯುವತಿಯನ್ನು ವೇಶ್ಯಾವಾಟಿಕೆಗೆ ಬೆಂಗಳೂರಿನಿಂದ ಕರೆತಂದ ಆರೋಪಿ ರಂಜಿತಾ ಹಾಗೂ ವೇಶ್ಯಾವಾಟಿಕೆ ದಂಧೆಗೆ ಮನೆಯನ್ನು ಬಾಡಿಗೆಗೆ ನೀಡಿದ ಮನೆಯ ಮಾಲೀಕ ದಿಲ್‌ರಾಜ್ ಎಂಬುವರು ತಲೆಮರೆಸಿಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.












Click it and Unblock the Notifications