ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೈಟ್ ಹಾಗೂ ಬುಲ್ ಟ್ರಾಲ್ ಫಿಶಿಂಗ್ ವಿರುದ್ಧ ಧರಣಿ ಆರಂಭಿಸಿದ ಮೀನುಗಾರರು

|
Google Oneindia Kannada News

ಮಂಗಳೂರು ಜನವರಿ 31: ಲೈಟ್ ಫಿಶಿಂಗ್ ಮತ್ತು ಬುಲ್‌ಟ್ರಾಲ್ ಮೀನುಗಾರಿಕೆ ವಿರುದ್ಧ ಮಂಗಳೂರಿನ ಮೀನುಗಾರರು ಸಿಡಿದೆದ್ದಿದ್ದಾರೆ . ಅಕ್ರಮವಾಗಿ ನಡೆಸಲಾಗುತ್ತಿರುವ ಲೈಟ್ ಫಿಶಿಂಗ್ ಚಟುವಟಿಕೆಯನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿ ಸಾಂಪ್ರದಾಯಿಕ ಮೀನುಗಾರರು ಮಂಗಳೂರಿನಲ್ಲಿ ಇಂದು ಧರಣಿ ಆರಂಭಿಸಿದ್ದಾರೆ.

ನಗರದ ಮೀನುಗಾರಿಕಾ ಬಂದರ್ ಪ್ರದೇಶದಲ್ಲಿರುವ ಮೀನುಗಾರಿಕಾ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘದ ನೇತೃತ್ವದಲ್ಲಿ ಮೀನುಗಾರರು ಧರಣಿ ಆರಂಭಿಸಿದ್ದಾರೆ.

ಕೆಲವು ಮೀನುಗಾರರು ನಿಯಮ ಉಲ್ಲಂಘಿಸಿ ಲೈಟ್ ಫಿಶಿಂಗ್ ಮತ್ತು ಬುಲ್‌ಟ್ರಾಲ್ ಮೀನುಗಾರಿಕೆ ನಡೆಸಿರುವುದು ಖಂಡನೀಯ. ಈ ಸಮಸ್ಯೆಯನ್ನು ನಿಭಾಯಿಸಲು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.

protest against light, Bull troll fishing

ಮಂಗಳೂರು ಟ್ರಾಲ್‌ಬೋಟ್ ಮೀನುಗಾರರ ಸಂಘದ ಅಧ್ಯಕ್ಷ ನಿತಿನ್ ಕುಮಾರ್, ಉಪಾಧ್ಯಕ್ಷ ಅಬ್ಬಾಸ್ ಹಾಜಿ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು. ನಿನ್ನೆ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರು, ಲೈಟಿಂಗ್ ಫಿಶಿಂಗ್ ಮೀನುಗಾರಿಕೆ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಮೀನುಗಾರರು ಪ್ರತಿಭಟನೆ ನಡೆಸಿ ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲ್ ಫಿಶಿಂಗನ್ನು ನಿಷೇಧಿಸುವಂತೆ ಆಗ್ರಹಿಸಿದರು.

English summary
Fisherman of Mangaluru staged protest against light and Bull troll fishing in deep sea,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X