ಬೆಳ್ತಂಗಡಿಯಲ್ಲಿ ಭಗವಧ್ವಜಕ್ಕೆ ಬೆಂಕಿ, ದಕ್ಷಿಣ ಕನ್ನಡದಲ್ಲಿ ಭುಗಿಲೆದ್ದ ಆಕ್ರೋಶ

ಮಂಗಳೂರು, ಆಗಸ್ಟ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಗಧ್ವಜಕ್ಕೆ ಬೆಂಕಿ ಇಟ್ಟಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬೆಳ್ತಂಗಡಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯೊಂದರಲ್ಲಿ ಭಗವಧ್ವಜಕ್ಕೆ ಬೆಂಕಿ ಹೊತ್ತಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತ ವೀಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಪ್ರತಿಭಟನೆ ಸಂದರ್ಭದಲ್ಲಿ ಹಿಂದೂ ಭಗವಧ್ವಜಕ್ಕೆ ಬೆಂಕಿ ಇಟ್ಟಿರುವ ವಿಚಾರವಾಗಿ ಇದೀಗ ಜಿಲ್ಲೆಯಲ್ಲಿ ಭಾರೀ ಚರ್ಚೆ ಆರಂಭಗೊಂಡಿದೆ. ದಲಿತ ಸಂಘಟನೆಗಳು ಬೆಳ್ತಂಗಡಿಯ ಮಿನಿ ವಿಧಾನಸೌಧದ ಮುಂಭಾಗ ನಡೆಸಿದ್ದ ಪ್ರತಿಭಟನೆ ಸಂದರ್ಭದಲ್ಲಿ ಈ ಭಗವಧ್ವಜವನ್ನು ಸುಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

Protesters Burns Bhagwa flag in Belthangady

ವಿಡಿಯೋದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಆರ್.ಎಸ್.ಎಸ್ ವಿರುದ್ಧ ಘೋಷಣೆ ಕೂಗುವ ಜೊತೆಗೆ ಹಿಂದೂ ಭಗಧ್ವಜಕ್ಕೂ ಬೆಂಕಿ ಹಚ್ಚುವ ಘಟನೆ ಸೆರೆಹಿಡಿಯಲಾಗಿದೆ. ಈ ವಿಚಾರವಾಗಿ ಇದೀಗ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Protesters Burns Bhagwa flag in Belthangady

ಹಿಂದೂ ಸಂಘಟನೆ ಹಾಗು ಸಂಘ ಪರಿವಾರಗಳ ಭದ್ರಕೋಟೆಯಾಗಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಘಟನೆ ನಡೆದಿರುವುದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿಯೂ ಪರ-ವಿರೋಧ ಚರ್ಚೆಗಳು ಆರಂಭಗೊಂಡಿದ್ದು, ಭಗಧ್ವಜಕ್ಕೆ ಬೆಂಕಿ ಇಟ್ಟವರನ್ನು ಈ ಕೂಡಲೇ ಬಂಧಿಸಬೇಕೆಂಬ ಕೂಗು ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+