ರೈಲ್ವೆ ದರ ಹೆಚ್ಚಳ ಖಂಡಿಸಿದ ಮಂಗಳೂರು ಕಾಂಗ್ರೆಸ್
ಮಂಗಳೂರು, ಜೂ. 23 : ರೈಲ್ವೆ ದರ ಹೆಚ್ಚಳ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡಸಿದರು. ಅತ್ತಾವರದಲ್ಲಿರುವ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ಆರಂಭಿಸಿದ ಕಾರ್ಯರ್ತರು ಮಂಗಳೂರು-ಭಟ್ಕಳ ರೈಲನ್ನು ತಡೆದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ದಕ್ಷಿಣ ಕನ್ನಡ ಉತ್ತರ ಬ್ಲಾಕ್ ಕಾಂಗ್ರೆಸ್ ಮುಖಂಡ ಸುರೇಶ್ ಬಳ್ಳಾಲ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು, ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. [ದರ ಏರಿಕೆ ಖಂಡಿಸಿದ ಜನವಾದಿ ಮಹಿಳಾ ಸಂಘಟನೆ]
ರೈಲ್ವೆ ನಿಲ್ದಾಣದಿಂದ ಹೊರಡಲು ಸಜ್ಜಾಗಿದ್ದ ಮಂಗಳೂರು-ಭಟ್ಕಳ ರೈಲನ್ನು ತಡೆದ ಪ್ರತಿಭಟನಾಕಾರರು ರೈಲ್ವೆ ಪ್ರಯಾಣ ದರ ಮತ್ತು ಸರಕು ಸಾಗಣೆ ದರವನ್ನು ಹೆಚ್ಚಳ ಮಾಡಿರುವುದನ್ನು ಖಂಡಿಸಿದರು. ರೈಲ್ವೆ ಪೊಲೀಸರು ಮತ್ತು ನಿಲ್ದಾಣದ ಸಿಬ್ಬಂದಿ ಕಾರ್ಯಕರ್ತರ ಮನವೊಲಿಸಿ ರೈಲು ಚಲಿಸಲು ಅವಕಾಶ ಮಾಡಿಕೊಟ್ಟರು. ಪ್ರತಿಭಟನೆಯ ಚಿತ್ರಗಳು

ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ರೈಲ್ವೆ ಪ್ರಯಾಣದರ ಹೆಚ್ಚಳವನ್ನು ಖಂಡಿಸಿ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಾರ್ಯರ್ತರು ಸೋಮವಾರ ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭಾರತಕ್ಕೆ ಒಳ್ಳೆಯ ದಿನ ಬಂತು, ಬೆಲೆ ಏರಿತು
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಮುಖಂಡ ಸುರೇಶ್ ಬಳ್ಳಾಲ್, ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಹೇಳಿದ್ದರು. ಅಧಿಕಾರಕ್ಕೆ ಬಂದ 20 ದಿನಗಳಲ್ಲಿಯೇ ರೈಲ್ವೆ ಪ್ರಯಾಣ ದರ ಹೆಚ್ಚಳ ಮಾಡಿ ಜನರಿಗೆ ಮೊದಲ ಉಡುಗೊರೆ ಕೊಟ್ಟಿದ್ದಾರೆ ಎಂದು ಟೀಕಿಸಿದರು.

ಹಿಂದಿನ ಸರ್ಕಾರ ದೂರಬೇಡಿ
ಪ್ರಧಾನಿ ಮತ್ತು ರೈಲ್ವೆ ಸಚಿವ ಸದಾನಂದ ಗೌಡರು ಬೆಲೆ ಏರಿಕೆ ಮಾಡಲು ಹಿಂದಿನ ಸರ್ಕಾರ ಕಾರಣ ಎಂದು ಹೇಳುತ್ತಾರೆ. ಇಂತಹ ಆರೋಪಗಳನ್ನು ಮಾಡಿ, ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಸುರೇಶ್ ಆರೋಪಿಸಿದರು.

ಬಿಜೆಪಿ ಆಡಳಿತ ನಾವು ನೋಡಿದ್ದೇವೆ
ಕಾಂಗ್ರೆಸ್ ನಾಯಕ ಜಿಎ ಬಾವ ಮಾತನಾಡಿ, ಬಿಜೆಪಿ ಸರ್ಕಾರ ಎಂತಹ ಜನಪರ ಆಡಳಿತ ನೀಡುತ್ತದೆ ಎಂದು ನಾವು ನೋಡಿದ್ದೇವೆ. ಕರ್ನಾಟಕದಲ್ಲಿ ಆಡಳಿತ ನಡೆಸಿದ ಬಿಜೆಪಿ ಐದು ವರ್ಷ ಎಷ್ಟು ಭ್ರಷ್ಟಾಚಾರ ಮಾಡಿದೆ ಎಂದು ನಮಗೆ ತಿಳಿದಿದೆ. ರೈಲ್ವೆ ಪ್ರಯಾಣ ದರ ಹೆಚ್ಚಳ ಮಾಡಿ ಸರ್ಕಾರ ಜನರಿಗೆ ವಂಚಿಸಿದೆ ಎಂದು ಅವರು ದೂರಿದರು.

ಸರ್ಕಾರ ಕಾಲಹರಣ ಮಾಡುತ್ತಿದೆ
ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೇಂದ್ರ ಸರ್ಕಾರ ಜನರ ಅಭಿವೃದ್ಧಿ ಮಾಡುವುದು ಬಿಟ್ಟು, ಸುಮ್ಮನೆ ಕಾಲಹರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ರೈಲು ತಡೆದು ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರು ಸುಮಾರು 20 ನಿಮಿಷಗಳ ಕಾಲ ಮಂಗಳೂರು-ಭಟ್ಕಳ ರೈಲನ್ನು ಪಡೆದು ಪ್ರತಿಭಟನೆ ನಡೆಸಿದರು. ರೈಲ್ವೆ ಪೊಲೀಸರು, ಪ್ರತಿಭಟನಾಕಾರರನ್ನು ರೈಲ್ವೆ ಹಳಿಗಳಿಂದ ಎಬ್ಬಿಸಿ, ರೈಲು ಚಲಿಸಲು ಅವಕಾಶ ಮಾಡಿಕೊಟ್ಟರು. ಉತ್ತರ ಬ್ಲಾಕ್ ಅಧ್ಯಕ್ಷ ವಿಕಾಸ್ ಕುಮಾರ್ ದಾಸ್, ಮುಖಂಡರಾದ ಟಿ.ಕೆ.ಸುಧೀರ್, ಬಾಲಕೃಷ್ಣ ಶೆಟ್ಟಿ ಮುಂತಾದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Click it and Unblock the Notifications
