• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರು ದಕ್ಷಿಣಕ್ಕೆ ಬಂಪರ್ ಕೊಡುಗೆ ಕೊಟ್ಟ ಸರ್ಕಾರ

|

ಮಂಗಳೂರು, ನವೆಂಬರ್ 26 : ಕರ್ನಾಟಕ ಸರ್ಕಾರ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದೆ. ಶಕ್ತಿನಗರ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರ್ಕಾರ ಅಧಿಕೃತವಾದ ಆದೇಶ ಹೊರಡಿಸಿದೆ.

ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. "ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ‌ ಕನಸು ಈಡೇರಿದಂತಾಗಿದೆ" ಎಂದು ಹೇಳಿದ್ದಾರೆ.

ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೋಷಕರ ಒತ್ತಾಯ: ಡಿಸಿಎಂ

"ಶಕ್ತಿನಗರ ಪರಿಸರದ ವಿದ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ‌ ಜನರ ಬೇಡಿಕೆಯನ್ನು ಈಡೇರಿಸುವ‌ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ" ಎಂದು ಶಾಸಕರು ಫೇಸ್ ಬುಕ್ ಮೂಲಕ ಮಾಹಿತಿ ನೀಡಿದ್ದಾರೆ.

ಕಾಲೇಜು ಆರಂಭ; ಬೆಂಗಳೂರಲ್ಲಿ 168 ಕೋವಿಡ್ ಪ್ರಕರಣ ಪತ್ತೆ

"ಒಬ್ಬ ಶಾಸಕನಾಗಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿಗಳು ಶಕ್ತಿನಗರದಲ್ಲೇ ತಮ್ಮ ಪದವಿ ವಿದ್ಯಾಭ್ಯಾಸ ಮುಂದುವರಿಸಬಹುದು. ಈಗ ನಾಲ್ಯಪದವಿನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗುವುದು" ಎಂದು ಶಾಸಕರು ತಿಳಿಸಿದ್ದಾರೆ.

ಭಾರತದ ಯಾವ ರಾಜ್ಯಗಳಲ್ಲಿ ಯಾವಾಗ ತೆರೆಯುತ್ತೆ ಶಾಲಾ-ಕಾಲೇಜು?

ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ; "ನಾನು ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ದಿನಗಳಲ್ಲಿ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ" ಎಂದು ಶಾಸಕರು ಹೇಳಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಈ ವಿಚಾರವಾಗಿ ಚರ್ಚಿಸಿ ಕಾಲೇಜು ಸ್ಥಾಪನೆಗೆ ಮನವಿ ಮಾಡಿದ್ದೆ. ಇಂದು ಸರಕಾರವು ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದೆ. ಇದಕ್ಕಾಗಿ ಶಿಕ್ಷಣ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪೋಸ್ಟ್ ಹಾಕಿದ್ದಾರೆ.

English summary
Karnataka government approved to open PU college at Shakti Nagar Mangaluru south assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X