ಪುತ್ತೂರು: ರನ್ನಿಂಗ್ ರೇಸ್‌ನಲ್ಲಿ ಸೋಲು: ಸಾವಿಗೆ ಶರಣಾದ ಪಿಯು ವಿದ್ಯಾರ್ಥಿನಿ
ಮಂಗಳೂರು, ನವೆಂಬರ್ 27: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರಕ್ಕೆ ಮನನೊಂದು ವಿದ್ಯಾರ್ಥಿನಿ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತ ದುರ್ದೈವಿ.
ಮೃತ ನಿಶಾ ಅಥ್ಲೆಟಿಕ್ ಆಗಿದ್ದು, ರನ್ನಿಂಗ್ ರೇಸ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ಮೈಲುಗೈ ಸಾಧಿಸಿದ್ದಳು. ಈ ಬಾರಿ ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಳು. ರನ್ನಿಂಗ್ ರೇಸ್‌ನಲ್ಲಿ ಸೋಲುಕಂಡಿದಕ್ಕೆ ತೀವ್ರ ಬೇಸರಗೊಂಡಿದ್ದ ನಿಶಾಬ ಳಿಕ ಖಿನ್ನತೆಗೊಳಗಾಗಿದ್ದಾಳೆ ಎನ್ನಲಾಗಿದೆ.

ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಕಳೆದ ವಾರ ನಿಶಾ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಾಳೆ. ಬಳಿಕ ತೀವ್ರ ವಾಂತಿಯಾಗುತ್ತಿದ್ದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ತಿಳಿದು ಬಂದಿದ್ದು, ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ನಿಶಾಳನ್ನು ಪರೀಕ್ಷಿಸಿದ ವೈದ್ಯರು ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
1.57 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ: ಮೂವರ ಬಂಧನ
ಮಂಗಳೂರಿನ ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ 1.57 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ (ಅಂಬರ್ ಗ್ರೀಸ್)ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು ಮೂಲದ ಸದ್ಯ ಬಂಟ್ವಾಳ ತಾಲೂಕಿನ ವಿಟ್ಲ ಮಂಗಿಲಪದವು ನಿವಾಸಿಗಳಾದ ಪ್ಯಾರೇಜಾನ್ (37), ಬದ್ರುದ್ದೀನ್ (28), ತಮಿಳುನಾಡಿನ ನಾಗಪಟ್ಟಿನಂ ಜಿಲ್ಲೆಯ ಸನ್ನಿಧಿ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್.(22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಮಂಗಳೂರಿನ ಪಂಪ್‌ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಬಳಿ ಮೂವರು ಸ್ವಿಫ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಬಂದ ಖಚಿತ ಮಾಹಿತಿಯನ್ವಯ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತರಿಂದ 1.575 ಕೆಜಿ ತೂಕದ 1,57,50,000 ರೂ. ಮೌಲ್ಯದ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಹಾಗೂ ಕಾರು, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ವಶಕ್ಕೆ ಪಡೆದ ವಸ್ತುಗಳ ಮೌಲ್ಯ 1,62,80,000 ರೂಪಾಯಿ ಆಗಬಹುದೆಂದು ಅಂದಾಜಿಸಲಾಗಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications