ಲಂಚ ಸ್ವೀಕರಿಸುತ್ತಿದ್ದಾಗ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ

ಮಂಗಳೂರು ಜೂನ್ 21: ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್‌ ಗುರುವಾರ ಸಂಜೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ವೇಳೆ ಅಧಿಕಾರಿಗಳಿಗೆ ಊಟ, ಉಪಹಾರ ಸರಬರಾಜು ಮಾಡಿದ ಕೆಟರಿಂಗ್ ಮಾಲೀಕರೊಬ್ಬರಿಗೆ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ. ಬಿಲ್ ಪಾವತಿಸಬೇಕಾದರೆ ತನಗೆ 1 ಲಕ್ಷದ 25 ಸಾವಿರ ರೂಪಾಯಿ ಲಂಚ ನೀಡಬೇಕು ಎಂದು ಪ್ರದೀಪ್ ಕುಮಾರ್‌ ಬೇಡಿಕೆ ಇರಿಸಿದ್ದು, ಈ ಬಗ್ಗೆ ಪೈ ಕೆಟರಿಂಗ್ ಮಾಲೀಕ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.

Puttur Tahsildar trapped in ACB net While taking bribe

ಗುರುವಾರ ಸಂಜೆ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪ್ರದೀಪ್ ಕುಮಾರ್‌ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಪ್ರದೀಪ್‌ರವರನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ದರ್ಬೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+