ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಂಚ ಸ್ವೀಕರಿಸುತ್ತಿದ್ದಾಗ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ

|
Google Oneindia Kannada News

ಮಂಗಳೂರು ಜೂನ್ 21: ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಪುತ್ತೂರು ತಹಶೀಲ್ದಾರ್ ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್‌ ಗುರುವಾರ ಸಂಜೆ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

 ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಮಾರುತ್ತಿದ್ದ ವ್ಯಕ್ತಿ ಬಂಧನ ಕಾಲೇಜು ವಿದ್ಯಾರ್ಥಿಗಳಿಗೆ ಕೊಕೇನ್ ಮಾರುತ್ತಿದ್ದ ವ್ಯಕ್ತಿ ಬಂಧನ

ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ವೇಳೆ ಅಧಿಕಾರಿಗಳಿಗೆ ಊಟ, ಉಪಹಾರ ಸರಬರಾಜು ಮಾಡಿದ ಕೆಟರಿಂಗ್ ಮಾಲೀಕರೊಬ್ಬರಿಗೆ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ. ಬಿಲ್ ಪಾವತಿಸಬೇಕಾದರೆ ತನಗೆ 1 ಲಕ್ಷದ 25 ಸಾವಿರ ರೂಪಾಯಿ ಲಂಚ ನೀಡಬೇಕು ಎಂದು ಪ್ರದೀಪ್ ಕುಮಾರ್‌ ಬೇಡಿಕೆ ಇರಿಸಿದ್ದು, ಈ ಬಗ್ಗೆ ಪೈ ಕೆಟರಿಂಗ್ ಮಾಲೀಕ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.

Puttur Tahsildar trapped in ACB net While taking bribe

ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಬಂಧನವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಬಂಧನ

ಗುರುವಾರ ಸಂಜೆ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪ್ರದೀಪ್ ಕುಮಾರ್‌ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ಪ್ರದೀಪ್‌ರವರನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ದರ್ಬೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

English summary
Puttur Tahsildar Dr. Pradeep Kumar has been trapped by ACB officials while taking Bribe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X