ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ನೆರವು ಘೋಷಿಸಿದ ಪುತ್ತೂರಿನ ವಿದ್ಯಾಸಂಸ್ಥೆ

ಮಂಗಳೂರು, ಏಪ್ರಿಲ್ 28: ಮೂಲಭೂತವಾದಿಗಳ ಆಕ್ರಮಣಕ್ಕೆ ತುತ್ತಾಗಿ ಹೀನಾಯ ನೋವು ಅನುಭವಿಸಿದ ಕಾಶ್ಮೀರಿ ಪಂಡಿತರ ನೆರವಿಗೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದು ಮುಂದಾಗಿದೆ.

ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾದ ಪಂಡಿತರ ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣವನ್ನು ನೀಡುವುದಾಗಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯು ಘೋಷಿಸಿದೆ. ಸ್ವತಃ ಕಾಶ್ಮೀರದಲ್ಲಿ ಈ ಬಗ್ಗೆ ಘೋಷಣೆ ಮಾಡಿದ ವಿದ್ಯಾಸಂಸ್ಥೆ, ಕಾಶ್ಮೀರಿ ಪಂಡಿತರ ಜೊತೆ ಮಾತನಾಡಿ ತಮ್ಮ ನೋವಿಗೆ ಹೆಗಲಾಗುವುದಾಗಿ ಭರವಸೆ ನೀಡಿದೆ.

ಆರನೇ ತರಗತಿಯಿಂದ ಪದವಿ ಹಂತದವರೆಗೆ ಯಾವುದೇ ತರಗತಿಯಲ್ಲಿ ಓದಲು ಬಯಸುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಈ ಉಚಿತ ಸೌಲಭ್ಯ ದೊರಕಲಿದೆ. ಜತೆಗೆ ಊಟೋಪಚಾರ, ವಸತಿಗಳೂ ಶುಲ್ಕರಹಿತವಾಗಿ ಲಭ್ಯವಾಗಲಿವೆ.

Putturs Ambika Education Institute Announces Free Education Assistance For Children of Kashmiri Pandits

20ನೇ ಶತಮಾನದ ಅಂತ್ಯದ ದಶಕದಲ್ಲಿ ಕಣಿವೆ ರಾಜ್ಯ ಹಾಗೂ ದೇಶದ ಮುಕುಟಮಣಿ ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಅಸಂಖ್ಯಾತ ಕಾಶ್ಮೀರಿ ಪಂಡಿತರು ಹತರಾಗಿದ್ದು, ಅವರ ಮೇಲೆ ಅಮಾನುಷ ರೀತಿಯ ದೌರ್ಜನ್ಯಗಳು ನಡೆದಿದ್ದವು. ತಮ್ಮ ಮೇಲಾಗುತ್ತಿರುವ ಕೌರ್ಯದಿಂದ ಕಂಗೆಟ್ಟ ಕಾಶ್ಮೀರಿ ಪಂಡಿತರು ಅಲ್ಲಿಂದ ಓಡಿ ಹೋಗಿ ದೇಶದ ವಿವಿಧ ಭಾಗಗಳಲ್ಲಿ ಆಶ್ರಯ ಪಡೆದಿದ್ದರು.

ದೇಶದ ಬಗೆಗೆ, ನೊಂದವರ ಬಗೆಗೆ ಕಾಳಜಿ ಹೊಂದಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್, ಇತ್ತೀಚೆಗಷ್ಟೇ ಬಿಡುಗಡೆಯಾದ "ಕಾಶ್ಮೀರಿ ಫೈಲ್ಸ್'' ಚಿತ್ರವನ್ನು ತನ್ನೆಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ತೋರಿಸಿತ್ತು. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯದ ಕರಾಳ ಸತ್ಯವನ್ನು ಯುವ ಸಮುದಾಯದ ಮುಂದೆ ಅನಾವರಣಗೊಳಿಸಿ ಅವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರ ವೀಕ್ಷಣೆಗೆ ವಿದ್ಯಾರ್ಥಿಗಳನ್ನು ಸಿನಿಮಾ ಮಂದಿರಕ್ಕೆ ಕರೆದುಕೊಂಡು ಹೋಗಲಾಗಿತ್ತು ಎಂದು ಅಂಬಿಕಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದರು.

ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ ಹಾಗೂ ನಟ್ಟೋಜ ಫೌಂಡೇಶನ್‌ನ ಟ್ರಸ್ಟಿ ವೈದೇಹಿ ನಟ್ಟೋಜ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿ ಅಲ್ಲಿನ ಕಾಶ್ಮೀರಿ ಪಂಡಿತ್ ಸಂಘಟನೆಯನ್ನು ಭೇಟಿಯಾಗಿ ಉಚಿತ ಶಿಕ್ಷಣದ ಲಿಖಿತ ಭರವಸೆ ನೀಡಿದ್ದಾರೆ. ಅಲ್ಲದೆ ಜಮ್ಮುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಮಾಹಿತಿಯನ್ನು ಅಲ್ಲಿನ ಮಾಧ್ಯಮಗಳ ಮೂಲಕವೂ ತಿಳಿಸಿಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ಸುಬ್ರಹ್ಮಣ್ಯ ನಟ್ಟೋಜ, ಜಮ್ಮುವಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಗೆ ಮಾಧ್ಯಮ ವಲಯದಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ದೊರಕಿದೆ. ಅನೇಕ ವಾಹಿನಿಗಳು ಹಾಗೂ ಪತ್ರಿಕೆಗಳು ಈ ಉಚಿತ ಶಿಕ್ಷಣದ ಕೊಡುಗೆಗೆ ವ್ಯಾಪಕ ಪ್ರಚಾರ ನೀಡಿವೆ, ಸಂದರ್ಶನವನ್ನೂ ನಡೆಸಿವೆ.

ಕಾಶ್ಮೀರಿ ಪಂಡಿತರ ಸಂಘಟನೆಯೂ ಈ ಕೊಡುಗೆಯ ಬಗೆಗೆ ಕೃತಜ್ಞತೆ ಸಲ್ಲಿಸಿದೆ. ಮಾತ್ರವಲ್ಲದೆ ಈಗಾಗಲೇ ನಾಲ್ಕಾರು ಮಂದಿ ಕಾಶ್ಮೀರಿ ಪಂಡಿತರು ಅಂಬಿಕಾ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರ್ಪಡೆಗೊಳಿಸುವ ಬಗೆಗೆ ಕರೆ ಮಾಡಿ ವಿಚಾರಿಸಿದ್ದಾರೆ. ಇದಲ್ಲದೆ ದೌರ್ಜನ್ಯಕ್ಕೊಳಪಟ್ಟು ನಿರಾಶ್ರಿತರಾಗಿ ಆಗಮಿಸಿದ ಕಾಶ್ಮೀರಿ ಪಂಡಿತರು ಬೆಂಗಳೂರಿನಲ್ಲಿಯೂ ಅನೇಕ ಮಂದಿ ಇದ್ದು, ಅವರ ಮಕ್ಕಳಿಗೂ ಈ ಯೋಜನೆ ಲಭ್ಯವಾಗಲಿದೆ ಅಂತಾ ಹೇಳಿದ್ದಾರೆ.

ಕಾಶ್ಮೀರಿ ಪಂಡಿತರ ಮೇಲಾದ ದೌರ್ಜನ್ಯ ತುಂಬಾ ಆಘಾತಕಾರಿಯಾದದ್ದು, ಹೇಗೆ ದೇಹದ ಯಾವುದೇ ಭಾಗಕ್ಕೆ ಗಾಯವಾದರೂ ನಾವು ತಕ್ಷಣ ಗಮನಹರಿಸುತ್ತೇವೆಯೊ, ಹಾಗೆಯೇ ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ ಅದಕ್ಕೆ ಸ್ಪಂದಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಸಾಮಾಜಿಕ ಹಾಗೂ ನೈತಿಕ ಜವಾಬ್ದಾರಿಯ ನೆಲೆಯಿಂದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತೇವೆ ಅಂತಾ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇದ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದ್ದಾರೆ.

ಏತನ್ಮಧ್ಯೆ, ಪುತ್ತೂರಿನ ಕೆಲವು ಸಹೃದಯರೂ ಈ ಯೋಜನೆಗೆ ಕೈಜೋಡಿಸಲಾರಂಭಿಸಿದ್ದಾರೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ತಮ್ಮ ಮನೆಯಲ್ಲಿಯೇ ಉಚಿತವಾಗಿ ಆಶ್ರಯ ಹಾಗೂ ಆಹಾರ ನೀಡಿ ಅಂಬಿಕಾ ಸಂಸ್ಥೆಗಳಲ್ಲಿ ಓದಿಸುವ ಹಿನ್ನೆಲೆಯಲ್ಲಿ ಆಸಕ್ತಿ ತೋರಿದ್ದಾರೆ.

Recommended Video

      ಹಿಂದಿ ರಾಷ್ಟ್ರಭಾಷೆ ವಿವಾದದಲ್ಲಿ ಅಜಯ್ ದೇವಗನ್ ಕೀಳು ಮನಸ್ಥಿತಿ ಬಿಚ್ಚಿತ್ತ ನೀನಾಸಂ ಸತೀಶ್ | Oneindia Kannada

      ನಟ್ಟೋಜ ಫೌಂಡೇಶನ್ ಟ್ರಸ್ಟ್ ತನ್ನ ಆಶ್ರಯದಲ್ಲಿ ಅಂಬಿಕಾ ವಿದ್ಯಾಲಯ (ಸಿಬಿಎಸ್ಇ), ವಸತಿಯುಕ್ತ ಹಾಗೂ ದೈನಂದಿನ ಓಡಾಟಕ್ಕನುಗುಣವಾಗಿ ಎರಡು ಪ್ರತ್ಯೇಕ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ಪದವಿ ಮಹಾವಿದ್ಯಾಲಯವನ್ನು ನಡೆಸುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+