ಮಂಗಳೂರು ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ

ಮಂಗಳೂರು, ಆಗಸ್ಟ್ 10: ಇಲ್ಲಿನ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳ ತಂಡ ಮತ್ತೊಬ್ಬ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಗುರುವಾರ ನಡೆದಿದೆ.

ವಿದ್ಯಾರ್ಥಿಗಳ‌ ಮಧ್ಯದ ವೈಮನಸ್ಸು ಕಾಲೇಜು ಬಿಡುವ ವೇಳೆ ಭುಗಿಲೆದ್ದಿದ್ದು, ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ. ಕಾಲೇಜಿನ ಎದುರಿನ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿಕೊಂಡು ಹೋಗಿ ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಸಿನಿಮೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ.

Quarrel of Milagres college students video went viral

ಈ ಹಿಂದೆ ಇದೇ ಕಾಲೇಜಿನಲ್ಲಿ ಪ್ರಾಂಶುಪಾಲರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ ಸುದ್ದಿಯಾಗಿತ್ತು. ವಿದ್ಯಾರ್ಥಿಗಳ ಮಧ್ಯದ ಹೊಡೆದಾಟದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಆ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Quarrel of Milagres college students video went viral

ಈ ಘಟನೆಯ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರಲಿಲ್ಲ. ಆದರೆ ವಿದ್ಯಾರ್ಥಿಗಳ ಹೊಡೆದಾಟದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+