ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ರಾಹುಲ್ ಗಾಂಧಿ

ಮಂಗಳೂರು, ಏಪ್ರಿಲ್ 27: ಕರಾವಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಂಟ್ವಾಳದಿಂದ ಹೆಲಿಕಾಪ್ಟರ್ ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಈ ವೇಳೆ ದೇವಸ್ಥಾನಗಳ ಸಿಬ್ಬಂದಿಯನ್ನು ರಾಹುಲ್ ಗಾಂಧಿ ಗುರುತು ಹಿಡಿದಿದ್ದಾರೆ. ತಮಗೆ ನಿಮ್ಮನ್ನು ನೋಡಿದ ನೆನಪಿದೆ ಎಂದಿದ್ದಾರೆ. ಇದರಿಂದ ಸಿಬ್ಬಂದಿಗಳು ಖುಷಿಯಾಗಿದ್ದಾರೆ.

ಮಂಜುನಾಥ ಸ್ವಾಮಿಗೆ ಫಲಕಾಣಿಕೆ ಅರ್ಪಿಸಿದ ರಾಹುಲ್ ಗಾಂಧಿ, ವಿಶೇಷ ಪೂಜೆಯಲ್ಲಿ ಭಾಗಿಯಾದರು.

Rahul Gandhi visits Shri Kshetra Dharmastala

ಈ ಸಂದರ್ಭದಲ್ಲಿ ಮಂಜುನಾಥ ಸ್ವಾಮಿ ಎದುರು ರಾಹುಲ್ ಗಾಂಧಿ ಸಂಕಲ್ಪವನ್ನೂ ಮಾಡಿದರು. ಜೊತೆಗೆ ಪ್ರಸಾದ ಸ್ವೀಕರಿಸಿದರು ಎಂದು ವೀರೇಂದ್ರ ಹೆಗ್ಗಡೆ ಹೇಳಿದರು.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜೊತೆಗೆ ಸಮಾಲೋಚನೆ ನಡೆಸಿದರು. ನಂತರ ಇಲ್ಲಿನ ಸನ್ನಿಧಿ ವಸತಿಗೃಹದಲ್ಲಿ ಮಧ್ಯಾಹ್ನದ ಊಟ ಸೇವಿಸಿದರು.

ರಾಹುಲ್ ಗಾಂಧಿಯವರ ಜೊತೆ ಕಾಂಗ್ರೆಸ್ ಮುಖಂಡರು ಕೂಡ ಊಟ ಮಾಡಿದರು.

ಧರ್ಮಸ್ಥಳಕ್ಕೆ ರಾಹುಲ್ ಗಾಂಧಿ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ. ಒಂಭತ್ತು ವರ್ಷಗಳ ಹಿಂದೆ ರಾಹುಲ್ ಗಾಂಧಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+