Rain Alert: ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಮಳೆ, ವರ್ಷದ ಮೊದಲ ವರ್ಷಧಾರೆ

ಮಂಗಳೂರು, ಮಾರ್ಚ್ 22: ಬಿಸಿಲಿನಿಂದ ಬಸವಳಿದಿದ್ದ ಕರಾವಳಿ ಜನರಿಗೆ ವರುಣ ತಂಪೆರೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಕಾದ ಕಾವಲಿಯಂತಾಗಿದ್ದ ಭೂಮಿ ಮಳೆ ಹನಿ ಸ್ಪರ್ಶದಿಂದ ತಂಪಾಗಿದೆ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊದಲ ಮಳೆಯಾಗಿದ್ದು, ಬೆಳ್ಳಂಬೆಳಿಗ್ಗೆ ಮಳೆಯ ಸಿಂಚನವಾಗಿದೆ. ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಹಲವೆಡೆ ಮಳೆಯಾಗಿದ್ದು, ಜನರು ಫುಲ್‌ ಖುಷಿಯಾಗಿದ್ದಾರೆ.

Rain Alert Season s First Rain Happening In Dakshina Kannada District

ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ರಾಜ್ಯದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ವರ್ಷದ ಮೊದಲ ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ಈ ಬಾರಿ ರಾಜ್ಯದಲ್ಲಿ ಅವಧಿಗೂ ಮುನ್ನವೇ ಮಳೆ ಆರಂಭವಾಗುವ ಲಕ್ಷಣವಿದ್ದು, ಕಳೆದ ಬಾರಿಯಂತಾಗದೇ ಈ ಬಾರಿ ಉತ್ತಮ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಲಿದ್ದು, ಏಪ್ರಿಲ್ ಎರಡನೇ ವಾರ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+