ಭಾರೀ ಮಳೆಗೆ ಮತ್ತೊಂದು ಬಲಿ: ಬೆಳ್ತಂಗಡಿಯಲ್ಲಿ ಯುವತಿ ದಾರುಣ ಸಾವು

ಮಂಗಳೂರು, ಜೂನ್‌ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಬಾರಿ ಮಳೆಯ ಅವಾಂತರಕ್ಕೆ ಸಾವನ್ನಪ್ಪುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬರ್ಗುಲಾದ ಪ್ರತೀಕ್ಷಾ ಶೆಟ್ಟಿ ಮನೆಯ ಸಮೀಪದ ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್‌ ಪ್ರವಹಿಸಿದೆ. ಈ ವೇಳೆ ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ರಸ್ತೆಗೆ ಬಂದಿದ್ದಾಳೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

Rain Death A Young Woman Dies After Touching An Electric Wire In Belthangady

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಯುವತಿಯ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬಲಿಯಾದವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ವಿದ್ಯುತ್ ತಂತಿ ಸ್ಪರ್ಶಸಿ ಇಬ್ಬರು ಸಾವು

ಮಂಗಳೂರು ನಗರದ ರೊಸಾರಿಯೋ ಚರ್ಚ್ ಸಮೀಪದ ಆಟೋ ತೊಳೆಯುತ್ತಿದ್ದ ಚಾಲಕರಿಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಸಿದೆ. ರಿಕ್ಷಾ ತೊಳೆಯುತ್ತಿದ್ದ ರಾಜು ಎಂಬುವವರಿಗೆ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ. ಈ ವೇಳೆ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಇವರ ರಕ್ಷಣೆಗೆ ಧಾವಿಸಿದ ಮಿತ್ರ ಆಟೋ ಚಾಲಕ ದೇವರಾಜು ಸಹ ವಿದ್ಯುತ್ ತಲುಗಿ ಸಾವನ್ನಪ್ಪಿದ್ದಾರೆ.

Rain Death A Young Woman Dies After Touching An Electric Wire In Belthangady

ಮಂಗಳೂರು: ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ಮಂಗಳೂರು, ಜೂನ್‌ 26: ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ಯಾಸಿರ್(45), ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸತತ ಮಳೆಯಿಂದ ಕುತ್ತಾರು ಮದನಿ ನಗರದ ಅಬೂಬಕ್ಕರ್ ಎನ್ನುವವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದಿದ್ದು, ಯಾಸಿರ್ ಅವರ ಮನೆಯ ಗೋಡೆಗೆ ಬಿದ್ದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆಯೂ ಗೋಡೆ ಉರುಳಿ ಬಿದ್ದಿದ್ದರು, ನಾಲ್ಕು ಜನರು ಮಲಗಿದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮೂವರ ಮೃತದೇಹಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಮತ್ತೊಬ್ಬ ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದ್ದು, ಗೋಡೆಯ ಕೆಳಗೆ ಸಿಕ್ಕ ಮೃತದೇಹ ತೆಗೆಯಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+