ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದ್ವೀಪದಂತಾದ ಕುಕ್ಕೆ ಸುಬ್ರಹ್ಮಣ್ಯ, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ

|
Google Oneindia Kannada News

Recommended Video

ಮಂಗಳೂರಿನಲ್ಲಿ ಮತ್ತಷ್ಟು ಮಳೆ ಆಗುವ ಸಾಧ್ಯತೆ..! | Oneindia Kannada

ಮಂಗಳೂರು, ಆಗಸ್ಟ್ 16: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ತುರ್ತು ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಗುರುವಾರ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದೆ. ಕೆಲವೆಡೆ ಗಾಳಿ, ಮಳೆಯಾಗುತ್ತಿದೆ. ಈ ನಡುವೆ ನೇತ್ರಾವತಿ, ಕುಮಾರಧಾರಾ ನದಿಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ.

ಮಳೆ ಅಬ್ಬರ: ಭರ್ತಿಯಾದ ಜಲಾಶಯಗಳ ಒಡಲುಮಳೆ ಅಬ್ಬರ: ಭರ್ತಿಯಾದ ಜಲಾಶಯಗಳ ಒಡಲು

ಸುಳ್ಯ, ಸುಬ್ರಹ್ಮಣ್ಯ, ಕುಲ್ಕುಂದ, ಕುದುರೆಮಜಲು, ನೂಜಿಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುದುರೆಮಜಲಿನಲ್ಲಿ 15ಕ್ಕೂ ಹೆಚ್ಚು ಮನೆಗಳು ಮುಳುಗಡೆಯಾಗಿದ್ದು, ತಡರಾತ್ರಿ ಸಂಕಷ್ಟದಲ್ಲಿದ್ದ ಕುಟಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ .

ಉಕ್ಕಿ ಹರಿಯುತ್ತಿವೆ ನದಿಗಳು

ಉಕ್ಕಿ ಹರಿಯುತ್ತಿವೆ ನದಿಗಳು

ಅಪಾಯದ ಮಟ್ಟ ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು 8.6ಮೀಟರ್ ಎತ್ತರದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಹಲವು ಪ್ರದೇಶಗಳು ಮುಳುಗಡೆಯಾಗುವ ಭೀತಿ ಎದುರಾಗಿದೆ. ನೇತ್ರಾವತಿ ನದಿ ತಟದ ಗ್ರಾಮಗಳು ಜಲಾವೃತಗೊಂಡಿದ್ದು ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ.

ಶಾಲೆಗಳಿಗೆ ರಜೆ ಘೋಷಣೆ

ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಾಗು ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಹಾಗು ಸುಳ್ಯ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಅಲ್ಲಿಯ ಪರಿಸ್ಥಿತಿ ಅವಲೋಕಿಸಿ ಆಯಾ ತಾಲೂಕಿನ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

100ಕ್ಕೂ ಹೆಚ್ಚು ಮನೆಗಳು ಮುಳುಗಡೆ

100ಕ್ಕೂ ಹೆಚ್ಚು ಮನೆಗಳು ಮುಳುಗಡೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಪಾಯದ ಮಟ್ಟ ಮೀರಿದ ಕುಮಾರಾಧಾರಾ ನದಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣ ದ್ವೀಪವಾಗಿ ಮಾರ್ಪಟ್ಟಿದೆ. ರಾಜ್ಯಹೆದ್ದಾರಿಯಲ್ಲೇ ಕುಮಾರಾಧಾರಾ ನದಿ ನೀರು ಹರಿಯುತ್ತಿದ್ದು ಕುಮಾರಾಧಾರಾ ನದಿ ತೀರದ ಕುಲ್ಕುಂದ,ನೂಜಿ ಬಾಳ್ತಿಲ ಗ್ರಾಮದ 100ಕ್ಕೂ ಹೆಚ್ಚು ಮನೆ ಮುಳುಗಡೆ ಯಾಗಿದೆ. ಈ ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ರವಾನಿಸಲಾಗಿದೆ.

ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಮುಂದಿನ 24 ಗಂಟೆಗಳ ಕಾಲ ಕರಾವಳಿ ಪ್ರದೇಶದಲ್ಲಿ ಮೀನುಗಾರರು ಸಮುದ್ರ ಅಥವಾ ನದಿಗಳಲ್ಲಿ ಮೀನುಗಾರಿಕೆಗೆ ತೆರಳಬಾರದು. ತಗ್ಗು ಪ್ರದೇಶ ವಾಶಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ರವಾನಿಸಲಾಗಿದೆ.

English summary
Rainfall in the coastal districts is continuous. Heavy rainfall is likely to be continuously over the next 24 hours. Kukke Subramanya has become an entire island.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X